Police Constable recruitment ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.
- ಜೂನ್ 10 ರಿಂದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆರಂಭಗೊಳ್ಳಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟಪಡಿಸಿದೆ.
- ನೇಮಕಾತಿ ನಡೆಯಲಿರುವ ಒಟ್ಟು 3,991 ಹುದ್ದೆಗಳ ಪೈಕಿ 596 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಿಡಲಾಗಿದೆ
- ಉಳಿದ 3,395 ಹುದ್ದೆಗಳನ್ನು ಸಾಮಾನ್ಯ ಮೂಲ ವೃಂದಕ್ಕೆ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿಯ ವರ್ಗದಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಒಳಮೀಸಲಾತಿಯ ನಿಯಮಗಳು ಅನ್ವಯವಾಗಲಿದ್ದು, ಈ ಹಿನ್ನೆಲೆಯಲ್ಲಿ ಅವರು ತಮಗೆ ಅನ್ವಯವಾಗುವ ಎಸ್ಸಿ-ಎ, ಎಸ್ಸಿ-ಬಿ ಅಥವಾ ಎಸ್ಸಿ-ಸಿ ಜಾತಿ ಪ್ರಮಾಣ ಪತ್ರಗಳ ಆರ್‌ಡಿ ಸಂಖ್ಯೆಯನ್ನು ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಜುಲೈ 3 ಕೊನೆಯ ದಿನಾಂಕವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಪ್ರಕಟಣೆಯಲ್ಲಿ ಸಮಗ್ರ ಮಾಹಿತಿ ಒದಗಿಸಿದೆ.
Police Constable recruitment 2026
