ಸಿಹಿ ಸುದ್ದಿ ! ಹುಲಿಕಲ್ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಸದ್ಯದಲ್ಲಿಯೇ ಸಿಗಲಿದೆ ಅವಕಾಶ

Published: 10 ಜೂನ್ 2026, 8:24 ಫೂರ್ವಾಹ್ನ • 1 min read

Hulikal Ghat Road / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಕಳೆದ ಎರಡು ತಿಂಗಳುಗಳಿಂದ ವಾಹನ ಸಂಚಾಕ್ಕೆ ಮುಚ್ಚಲ್ಪಟ್ಟಿದ್ದ ಹುಲಿಕಲ್ ಘಾಟಿ ರಸ್ತೆಯು ಶೀಘ್ರದಲ್ಲಿಯೇ ವಾಹನ ಸವಾರರಿಗೆ ಮುಕ್ತವಾಗಲಿದೆ. ಉಡುಪಿ ಹಾಗೂ ಕುಂದಾಪುರಕ್ಕೆ ಹೋಗಲು ಸುರಕ್ಷಿತ ಮಾರ್ಗವಾಗಿದ್ದ ಈ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿ ಇದೀಗ ಅಂತಿಮಘಟ್ಟ ತಲುಪಿದೆ. ಈ ಹಿನ್ನೆಲೆಯಲ್ಲಿ ಇನ್ನು 2 ಅಥವಾ 3 ದಿನಗಳಲ್ಲಿ ಸಣ್ಣ ವಾಹನಗಳು ಹಾಗೂ ಬಸ್ಸುಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸ್ತಳೀಯರು ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲಿ ಹೆಚ್ಚು ಪೋಸ್ಟ್​ಗಳು ಸಹ ಪ್ರಕಟವಾಗುತ್ತಿದೆ.

Hulikal Ghat Road Ready to Reopen for Traffic

ಹುಲಿಕಲ್ ಘಾಟಿ ಅಥವಾ ಬಾಳೆಬರೆ ಘಾಟಿಯಲ್ಲಿ ರಸ್ತೆ ವಿಸ್ತರಣೆ ಹಾಗೂ ತಡೆಗೋಡೆ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ಕಳೆದ ಏಪ್ರಿಲ್ ತಿಂಗಳಲ್ಲಿ ಕಾಮಗಾರಿ ನಡೆಯುತ್ತಿದ್ದಾಗ ಸಂಭವಿಸಿದ ಗುಡ್ಡ ಕುಸಿತದಿಂದಾಗಿ ಕಾಮಗಾರಿ ಸ್ಥಗಿತಗೊಂಡಿತ್ತು. ಅಲ್ಲದೆ ತಡೆಗೋಡೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಮೂವರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದರು. ಈ ಅವಘಡದ ತರುವಾಯ ಜಿಲ್ಲಾಡಳಿತ ಘಾಟಿಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿತ್ತು.

ಪ್ರಸ್ತುತ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿ ರಸ್ತೆಯ ಸ್ಥಿತಿಗತಿ ಹಾಗೂ ಕಾಮಗಾರಿಯ ಪ್ರಗತಿಯ ಕುರಿತು ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ಪರಿಶೀಲನಾ ವರದಿಯ ಆಧಾರದ ಮೇಲೆ ಲಘು ವಾಹನಗಳ ಸಂಚಾರಕ್ಕೆ ಷರತ್ತುಬದ್ಧ ಅನುಮತಿ ನೀಡುವ ಸಾಧ್ಯತೆಗಳಿವೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY

ajjimane ganesh

Senior Journalist | Malenadu Today
✓ Verified Journalist