Revolver / ಮಲೆನಾಡು ಟುಡೆ ಸುದ್ದಿ / ಚಿಕ್ಕಮಗಳೂರು / ಗೃಹಿಣಿಯೊಬ್ಬರು ಗುಂಡು ಹಾರಿಸಿಕೊಂಡು ಸಾವನ್ನಪ್ಪಿರುವ ಘಟನೆ ನಿನ್ನೆದಿನ ವರದಿಯಾಗಿದೆ. ಚಿಕ್ಕಮಗಳೂರು ನಗರದ ಹಾಲೇನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೃತಪಟ್ಟವರು 55 ವರ್ಷ ವಯಸ್ಸಿನ ಸುಮಾ . ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಇವರು ಬುಲೆಟ್ ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ.
ಮೃತ ಸುಮಾ ಅವರು ಲೈಸೆನ್ಸ್ ಹೊಂದಿದ್ದ ರಿವಾಲ್ವರ್ ಬಳಸುತ್ತಿದ್ದರು. ಅದರಿಂದಲೇ ಫೈರ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರ ಮೃತದೇಹ ಇದೇ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಸವನಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೆಲ್ನೋಟಕ್ಕೆ ಸುಮಾರವರು ಡೆತ್ ನೋಟ್ ಬರೆದಿಟ್ಟು ಈ ಕೃತ್ಯ ಎಸಗಿರುವ ಸಾಧ್ಯತೆಗಳಿವೆ. ಘಟನಾ ಸ್ಥಳದಲ್ಲಿ ದೊರೆತಿರುವ ಡೆತ್ ನೋಟ್ ಅನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಮೃತ ಸುಮಾ ಅವರ ಪತಿ ರಾಜೇಶ್ ಅವರು ಉದ್ಯಮಿಯಾಗಿದ್ದು, ಘಟನೆ ನಡೆದ ಸಮಯದಲ್ಲಿ ಅವರು ಮನೆಯಲ್ಲಿ ಇರಲಿಲ್ಲ .
