ಶಿವಮೊಗ್ಗ :  ಶಾಸಕ ರಿಜ್ವಾನ್ ಅರ್ಷದ್‌ಗೆ ಸಚಿವ ಸ್ಥಾನಕ್ಕಾಗಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ

ಹಂಚಿಕೊಳ್ಳಿ
WhatsApp Facebook X Telegram
Minister Post for Rizwan Arshad Fans Pray
Minister Post for Rizwan Arshad Fans Pray

Minister Post ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಬೆಂಗಳೂರಿನ ಶಿವಾಜಿನಗರ ವಿಧಾನ ಸಭಾ ಕ್ಷೇತ್ರದ ಶಾಸಕ  ರಿಜ್ವಾನ್ ಅರ್ಷದ್ ಅವರಿಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಹೈಕಮಾಂಡ್‌ಗೆ ಮನವಿ ಸಲ್ಲಿಸುವ ನಿಟ್ಟಿನಲ್ಲಿ ಅವರ ಅಭಿಮಾನಿಗಳು ಶಿವಮೊಗ್ಗದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಶಿವಮೊಗ್ಗದ ಹಜ್ರತ್ ಸೈಯದ್ ಷಾ ಅಲೀಂ ದೀವಾನ್ ಷಾ ಖಾದ್ರಿ ದರ್ಗಾದಲ್ಲಿ ಶಾಸಕರ ಬೆಂಬಲಿಗರು ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

ರಿಜ್ವಾನ್ ಅರ್ಷಾದ್ ಅಭಿಮಾನಿ ಬಳಗದ ಅಧ್ಯಕ್ಷರಾದ ಮೊಹಮ್ಮದ್ ಅರಿಫ್ ಉಲ್ಲಾ ಅವರ ನೇತೃತ್ವದಲ್ಲಿ ಅನೇಕ ಕಾರ್ಯಕರ್ತರು ಮತ್ತು ಅಭಿಮಾನಿಗಳು, ತಮ್ಮ ನೆಚ್ಚಿನ ನಾಯಕನಿಗೆ ಶೀಘ್ರದಲ್ಲೇ ಮಂತ್ರಿ ಭಾಗ್ಯ ಸಿಗಲಿ ಎಂದು ದರ್ಗಾಕ್ಕೆ ಪವಿತ್ರ ಘಲಪ್ ಹೊದಿಸಿ ಹರಕೆ ನೇರವೇರಿಸಿದರು.

ರಿಜ್ವಾನ್ ಅರ್ಷದ್ ಅವರು ಆರಂಭದಿಂದಲೂ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ದುಡಿದಿದ್ದಾರೆ. ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಅಭಿಮಾನಿಗಳು ಈ ಸಂದರ್ಭದಲ್ಲಿ ಬಹಿರಂಗವಾಗಿ ಮನವಿ ಮಾಡಿದರು.

Minister Post for Rizwan Arshad Fans Pray

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor