ಶಿವಮೊಗ್ಗ , ಸೀಗೆಹಟ್ಟಿ ರೌಡಿಶೀಟರ್ ಬರ್ಬರ ಹತ್ಯೆ

ಹಂಚಿಕೊಳ್ಳಿ
WhatsApp Facebook X Telegram
ಶಿವಮೊಗ್ಗ , ಸೀಗೆಹಟ್ಟಿ ರೌಡಿಶೀಟರ್ ಬರ್ಬರ ಹತ್ಯೆ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ನಗರದ ಗಾಂಧಿ ಬಜಾರ್ 1ನೇ ತಿರುವಿನಲ್ಲಿರುವ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಶಿವಮೊಗ್ಗದ ಗೋವಿಂದಾಪುರ ಆಶ್ರಯ ಬಡಾವಣೆಯ ನಿವಾಸಿ ನರಸಿಂಹ (39) ಎಂದು ಗುರುತಿಸಲಾಗಿದೆ
ಸೀಗೆಹಟ್ಟಿ ನಿವಾಸಿಯಾಗಿದ್ದ ಈತನನ್ನ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ತಂಡವೊಂದು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಅನಿಲ್ ಅಂಬು ಮತ್ತವನ ಸಹಚರರು ನರಸಿಂಹ ಅವರ ತಲೆ ಮತ್ತು ಕೈಗಳ ಮೇಲೆ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎನ್ಬಲಾಗಿದೆ. ದಾಳಿಯ ತೀವ್ರತೆಗೆ ಕೈಗಳು ತುಂಡಾಗಿದೆ.  ಮುಖವು ಸಂಪೂರ್ಣವಾಗಿ ಜಖಂಗೊಂಡು ಗುರುತು ಹಿಡಿಯಲಾಗದ ಸ್ಥಿತಿಯಲ್ಲಿದೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ.ಕಾರ್ಯಪ್ಪ ಹಾಗೂ ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣವು ಶಿವಮೊಗ್ಗದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor