ಶಿವಮೊಗ್ಗದಲ್ಲಿ ರಾಹುಲ್ ಕಾರ್ಸ್ ಪ್ರೈ.ಲಿ., (ಹೊಂಡಾಯಿ) ಕಂಪನಿಯಿಂದ Free Walk-In Interview! ವಿವರ ಇಲ್ಲಿದೆ

Free Walk-In Interview / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಉತ್ತಮ ಅವಕಾಶವೊಂದು ಇಲ್ಲಿದೆ. ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಜೂನ್ 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ರಾಹುಲ್ ಕಾರ್ಸ್ ಪ್ರೈ.ಲಿ., (ಹೊಂಡಾಯಿ) ಕಂಪನಿ ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.

  • ಈ Free Walk-In Interview ನಲ್ಲಿ ಪಾಲ್ಗೊಳ್ಳಲು ಪಿಯುಸಿ, ಐಟಿಐ, ಬಿಇ ಅಥವಾ ಯಾವುದೇ ಮಾನ್ಯತೆ ಪಡೆದ ಪದವಿಯನ್ನು ಪೂರ್ಣಗೊಳಿಸಬೇಕು
  • 18 ರಿಂದ 30 ವರ್ಷದೊಳಗಿನ ವಯೋಮಿತಿಯ ಪುರುಷ ಅಭ್ಯರ್ಥಿಗಳಿಗೆ ಮಾತ್ರ ಈ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
  • ಉದ್ಯೋಗಕ್ಕಾಗಿ ಬರುವ ಆಕಾಂಕ್ಷಿಗಳು ಕಡ್ಡಾಯವಾಗಿ ತಮ್ಮ ಸ್ವವಿವರಗಳಿರುವ ಬಯೋಡೇಟಾ ಹಾಗೂ ಆಧಾರ್ ಕಾರ್ಡ್‌ನ ಪ್ರತಿಗಳನ್ನು ತಮ್ಮೊಂದಿಗೆ ತರಬೇಕು

ಸಂದರ್ಶನ ಪ್ರಕ್ರಿಯೆಯು ಸಾಗರ ರಸ್ತೆಯಲ್ಲಿರುವ ಗುತ್ಯಪ್ಪ ಕಾಲೋನಿ, ಪಂಪಾ ನಗರದ 2ನೇ ಕ್ರಾಸ್‌ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಪ್ರಮುಖವಾಗಿ ಈ ನೇರ ಸಂದರ್ಶನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಯಾವುದೇ ರೀತಿಯ ಪ್ರವೇಶ ಶುಲ್ಕವಿರುವುದಿಲ್ಲ, ಸಂದರ್ಶನವು ಸಂಪೂರ್ಣವಾಗಿ ಉಚಿತವಾಗಿದೆ. ಉದ್ಯೋಗಾಕಾಂಕ್ಷಿಗಳು ಕಾರ್ಯಕ್ರಮದ ಕುರಿತು ಅಥವಾ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಛಿಸಿದಲ್ಲಿ, ಇಲಾಖೆಯ ಅಧಿಕೃತ ಮೊಬೈಲ್ ಸಂಖ್ಯೆಗಳಾದ 9380663606 ಅಥವಾ 9108235132 ಗಳನ್ನು ನೇರವಾಗಿ ಸಂಪರ್ಕಿಸಿ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಅಧಿಕೃತ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Whatsapp / https://chat.whatsapp.com/JrsZ8He4nN600n0r3tJItz