ಶಿವಮೊಗ್ಗ: ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ, ಹೆಗಲತ್ತಿಯ ಶ್ರೀ ನಾಗಯಕ್ಷೆ ದೇವಾಲಯದ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶಿವಮೊಗ್ಗ : ಜಲ್ ಜೀವನ್ ಮಿಷನ್ ಯೋಜನೆಯ ಲಕ್ಷಾಂತರ ರೂಪಾಯಿ ಮೌಲ್ಯದ ಪೈಪ್ ಕದ್ದ ಕಳ್ಳ ಪೊಲೀಸರ ಬಲೆಗೆ?
ಹೆಗಲತ್ತಿಯಲ್ಲಿ ನಡೆದ ಈ ಕಾರ್ಯಕ್ರಮದ ನೇತೃತ್ವವನ್ನು ಶ್ರೀ ನಾಗಯಕ್ಷೆ ದೇವಾಲಯದ ಪ್ರಮುಖರಾದ ಕಲ್ಪನಾ ಅಮ್ಮನವರು ವಹಿಸಿದ್ದರು. ಈ ವರ್ಷದಿಂದ ಆರಂಭಿಸಲಾದ ಈ ವಿಶೇಷ ಕಾರ್ಯಕ್ರಮದಲ್ಲಿ, ಗ್ರಾಮೀಣ ಪ್ರದೇಶದ ಸುಮಾರು 20 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಕ್ಕಾಗಿ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಲ್ಪನಾ ಅಮ್ಮನವರು, ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ, ಮುಂದಿನ ಅವರ ಶೈಕ್ಷಣಿಕ ಜೀವನವು ಉಜ್ವಲವಾಗಿರಲಿ ಎಂದು ಹಾರೈಸಿದರು.
