COURT LIVE

ಶಿವಮೊಗ್ಗ : ಜು.11 ಕ್ಕೆ ಲೋಕ್​ ಅದಾಲತ್​ , ಚೆಕ್​ ಬೌನ್ಸ್​ನಿಂದ ಸುಪ್ರೀಂಕೋರ್ಟ್ ಕೇಸ್​ವರೆಗೂ ಇತ್ಯರ್ಥಕ್ಕಿದೆ ಅವಕಾಶ!

Shivamogga Lok Adalat on July 11 Judge Manjunath GA
ಶೇರ್ ಮಾಡಿ WhatsApp Facebook X

Shivamogga Lok Adalat /ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜುಲೈ 11 ರಂದು ರಾಷ್ಟ್ರೀಯ ಲೋಕ್ ಅದಾಲತ್​ ನಡೆಯಲಿದೆ ಅಂತಾ ನ್ಯಾ.ಮಂಜುನಾಥ್​ ಜಿಎ ರವರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ನಡೆದ ಸುದ್ದಿಗೋಷ್ಟಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್, ನಗರ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿ ದೇವರಾಜ್ ಹಾಜರಿದ್ದರು. ಸುದ್ದಿಗೋಷ್ಟಿಗೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ಶಿವಮೊಗ್ಗ ವಾರ್ತಾ ಇಲಾಖೆಯಿಂದ ಬಂದಿರುವ ವಿವರ ಇಲ್ಲಿದೆ.

ಬಾಕಿ ಇರುವ ಪ್ರಕರಣಗಳ ತ್ವರಿತ ವಿಲೇವಾರಿಗಾಗಿ ಜುಲೈ 11 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವರ್ಷದ ಎರಡನೇ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ವೈವಾಹಿಕ/ವಿವಾಹ ವಿವಾದಗಳು, ಅಪಘಾತ ಪರಿಹಾರ ಪ್ರಕರಣಗಳು, ಕೌಟುಂಬಿಕ ದೌರ್ಜನ್ಯ, ಚೆಕ್ ಅಮಾನ್ಯ (ಬಾನ್ಸ್) ಪ್ರಕರಣಗಳು, ವಾಣಿಜ್ಯ ವಿವಾದಗಳು, ವೇತನ ಮತ್ತು ಸೇವೆಗೆ ಸಂಬಂಧಿಸಿದ ದಾವೆಗಳು, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ಗ್ರಾಹಕರ ವೇದಿಕೆ ಪ್ರಕರಣಗಳು, ಸಾಲದ ಪ್ರಕರಣಗಳು, ಪಾಲು ವಿಭಾಗ ಹಾಗೂ ಭೂಸ್ವಾಧೀನ ಪ್ರಕರಣಗಳು ಸೇರಿದಂತೆ ಎಲ್ಲಾ ಸಿವಿಲ್ ದಾವೆಗಳನ್ನು ಇಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು.

Whatsapp / https://chat.whatsapp.com/JrsZ8He4nN600n0r3tJItz

Shivamogga Lok Adalat / ರಾಷ್ಟ್ರೀಯ ಲೋಕ್ ಅದಾಲತ್‌ ಸಾಧನೆ

ಮಾರ್ಚ್ 14 ರಂದು ನಡೆದ ಮೊದಲ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿದ್ದ 14,501 ಪ್ರಕರಣಗಳನ್ನು ಇತ್ಯರ್ಥಪಡಿಸಿ ರೂ. 28.48 ಕೋಟಿ ಗೂ ಅಧಿಕ ಪರಿಹಾರ ವಿತರಿಸಲಾಗಿತ್ತು. ಹಾಗೆಯೇ 1,40,015 ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿ 17.26 ಕೋಟಿ ರೂ.ಗೂ ಅಧಿಕ ಮೊತ್ತದ ವಿವಾದಗಳನ್ನು ಬಗೆಹರಿಸಲಾಗಿತ್ತು.

ಸುಪ್ರೀಂ ಕೋರ್ಟ್ ಪ್ರಕರಣಗಳಿಗೆ “ಸಮಾಧಾನ್ ಸಮಾರೋಹ್”

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಆಗಸ್ಟ್ 21, 22 ಮತ್ತು 23 ರಂದು ಸುಪ್ರೀಂ ಕೋರ್ಟ್ಲ್ಲಿ ಬಾಕಿ ಇರುವ ಪ್ರಕರಣಗಳಿಗಾಗಿ “ಸಮಾಧಾನ್ ಸಮಾರೋಹ್” ಎಂಬ ವಿಶೇಷ ಲೋಕ್ ಅದಾಲತ್ ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಗುರುತಿಸಲಾದ 23 ಪ್ರಕರಣಗಳ ವಿವರಗಳನ್ನು ಈಗಾಗಲೇ ಕಳುಹಿಸಿಕೊಡಲಾಗಿದ್ದು, ಮಧ್ಯಸ್ಥಗಾರರ ಮೂಲಕ ರಾಜೀ ಸಂಧಾನ ಪ್ರಕ್ರಿಯೆ ಕೈಗೊಳ್ಳಲಾಗುವುದು. ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸಾರ್ವಜನಿಕರು ಈ ಮೂಲಕ ಸುಲಭವಾಗಿ ಬಗೆಹರಿಸಿಕೊಳ್ಳಬಹುದು ನ್ಯಾ. ಮಂಜುನಾಥ್​ ಜಿ. ಎ ತಿಳಿಸಿದ್ದಾರೆ.

ಚೆಕ್ ಅಮಾನ್ಯ ಪ್ರಕರಣಗಳಿಗೆ ವಿಶೇಷ ಲೋಕ್ ಅದಾಲತ್

ಚೆಕ್ ಅಮಾನ್ಯ ಕಾಯ್ದೆ ಅಡಿಯಲ್ಲಿ ಬಾಕಿ ಇರುವ ಪ್ರಕರಣಗಳ ತ್ವರಿತ ಇತ್ಯರ್ಥಕ್ಕಾಗಿ ಜುಲೈ 18 ಮತ್ತು ನವೆಂಬರ್ 21 ರಂದು ವಿಶೇಷ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೇ 31 ರವರೆಗೆ ಒಟ್ಟು 7,525 ಚೆಕ್ ಅಮಾನ್ಯ ಪ್ರಕರಣಗಳು ಬಾಕಿ ಇದ್ದು, ಉಭಯ ಪಕ್ಷಕಾರರು ನ್ಯಾಯಾಧೀಶರ ಸಮ್ಮುಖದಲ್ಲಿ ಇವುಗಳನ್ನು ಅಂದೇ ಇತ್ಯರ್ಥಪಡಿಸಿಕೊಂಡು ಅಂತಿಮ ಆದೇಶ ಪಡೆಯಬಹುದು.

ನ್ಯಾ. ಮಂಜುನಾಥ್​ ಜಿ. ಎ ,ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು

ಖಾಯಂ ಲೋಕ್ ಅದಾಲತ್ ಹಾಗೂ ಜಾಗೃತಿ ಅಭಿಯಾನ

ಸಾರ್ವಜನಿಕ ಉಪಯುಕ್ತ ಸೇವೆಗಳಾದ ಸಾರಿಗೆ (ಭೂ, ಜಲ, ವಾಯು), ಅಂಚೆ, ದೂರವಾಣಿ, ವಿದ್ಯುತ್, ನೀರು ಸರಬರಾಜು, ಸಾರ್ವಜನಿಕ ನೈರ್ಮಲ್ಯ, ವಿಮೆ, ಆಸ್ಪತ್ರೆ/ಔಷಧಾಲಯ, ಬ್ಯಾಂಕಿಂಗ್ ಹಾಗೂ ರಿಯಲ್ ಎಸ್ಟೇಟ್ ಸೇವೆಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಲು ‘ಖಾಯಂ ಲೋಕ್ ಅದಾಲತ್’ ಅತ್ಯುತ್ತಮ ವೇದಿಕೆಯಾಗಿದೆ. ಇಲ್ಲಿ ಯಾವುದೇ ಕೋರ್ಟ್ ಶುಲ್ಕ ಇರುವುದಿಲ್ಲ ಹಾಗೂ ಆದಾಯದ ಮಿತಿಯೂ ಇರುವುದಿಲ್ಲ. ಶಿವಮೊಗ್ಗ ಜಿಲ್ಲೆಯು ಮಂಗಳೂರು ವ್ಯಾಪ್ತಿಯ ಖಾಯಂ ಲೋಕ್ ಅದಾಲತ್ ಅಡಿಯಲ್ಲಿ ಬರಲಿದ್ದು, ಇದರ ಜಾಗೃತಿಗಾಗಿ ಜಿಲ್ಲಾದ್ಯಂತ ಅಭಿಯಾನ ಹಮ್ಮಿಕೊಳ್ಳಲಾಗಿದೆ.

Whatsapp / https://chat.whatsapp.com/JrsZ8He4nN600n0r3tJItz

ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor