SHIMOGA NEWS LIVE

ಸ್ಕೂಲ್​, ಕಾಲೇಜು ಸಿಬ್ಬಂದಿ ಜೊತೆ ಟ್ರಾಫಿಕ್​ ಪೊಲೀಸರ ಮೀಟಿಂಗ್! ಬೈಕ್​ ಓಡಿಸುವ ವಿದ್ಯಾರ್ಥಿಗಳೇ ಜಾಗ್ರತೆ

Shivamogga traffic police conduct an urgent meeting regarding student safety malenadutoday image
ಶೇರ್ ಮಾಡಿ WhatsApp Facebook X

Shivamogga traffic police / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಟ್ರಾಫಿಕ್ ಪೊಲೀಸರು, ಪುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿರುವ ನಡುವೆ ಇದೀಗ ಶಾಲೆ ಕಾಲೇಜುಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಅಪ್ರಾಪ್ತರ ಮೇಲೆ ನಿಗಾವಹಿಸಲು ಆರಂಭಿಸಿದ್ದಾರೆ. ಈ ನಿಟ್ಟಿನಲ್ಲಿ ಶಿವಮೊಗ್ಗ ನಗರದ ಎಲ್ಲಾ ಪದವಿಪೂರ್ವ ಮತ್ತು ಪದವಿ ಕಾಲೇಜುಗಳ ಆಡಳಿತ ಮಂಡಳಿಯ ಮುಖ್ಯಸ್ಥರು ಹಾಗೂ ಪ್ರಾಂಶುಪಾಲರ ಮಹತ್ವದ ಸಭೆಯನ್ನು ಆಯೋಜಿಸಿದ್ದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಇದರ ಆತಿಥ್ಯ ವಹಿಸಿತ್ತು.

Whatsapp / https://chat.whatsapp.com/JrsZ8He4nN600n0r3tJItz

ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಉಪ ಅಧೀಕ್ಷಕ ಸಂಜೀವ್ ಕುಮಾರ್, ಶಾಲಾ ವಾಹನಗಳ ಸುರಕ್ಷತೆ ಮತ್ತು ಸುಪ್ರೀಂ ಕೋರ್ಟ್ ನೀಡಿರುವ ಸ್ಪಷ್ಟ ಮಾರ್ಗಸೂಚಿಗಳ ಬಗ್ಗೆ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳಿಗೆ ವಿವರಿಸಿ, ಈ ವಿಚಾರವನ್ನು ಕಡ್ಡಾಯವಾಗಿ ಮತ್ತು ಚಾಚೂತಪ್ಪದೆ ಪಾಲಿಸಲೇಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಚರ್ಚೆಯಾದ ಪ್ರಮುಖ ಅಂಶಗಳು

  • ಶಾಲಾ ಹಾಗೂ ಕಾಲೇಜು ವಾಹನಗಳಿಗೆ ಸಂಬಂಧಿಸಿದ ಎಲ್ಲಾ ಅಗತ್ಯ ದಾಖಲೆಗಳು ಕಡ್ಡಾಯವಾಗಿ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳುವುದು ಆಡಳಿತ ಮಂಡಳಿಯ ಜವಾಬ್ದಾರಿಯಾಗಿದೆ.
  • ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನಗಳಲ್ಲಿ ಕಡ್ಡಾಯವಾಗಿ ಜಿಪಿಎಸ್ ಟ್ರ್ಯಾಕಿಂಗ್ ವ್ಯವಸ್ಥೆ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲೇಬೇಕು.
  • ಇದರ ಜೊತೆಗೆ, ವಿದ್ಯಾರ್ಥಿಗಳ ನಿರಂತರ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಕಾಲೇಜುಗಳ ಪ್ರವೇಶ ದ್ವಾರಗಳಲ್ಲಿ ತಪ್ಪದೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಬೇಕು
  • ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳು ಸ್ವತಃ ವಾಹನ ಚಲಾಯಿಸಿಕೊಂಡು ಕಾಲೇಜಿಗೆ ಬರುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಈ ಪ್ರವೃತ್ತಿಯನ್ನು ತಡೆಯುವ ಹಿನ್ನೆಲೆಯಲ್ಲಿ, ಕಾಲೇಜುಗಳಲ್ಲಿ ಪಾಲಕರ ಸಭೆಗಳನ್ನು ನಿಯಮಿತವಾಗಿ ನಡೆಸಿ, ಅಪ್ರಾಪ್ತ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ವಾಹನ ಚಾಲನೆ ಮಾಡಲು ಅವಕಾಶ ನೀಡದಂತೆ ಪೋಷಕರಲ್ಲಿ ಅರಿವು ಮೂಡಿಸಬೇಕು

ನಗರದಲ್ಲಿ ಅಪ್ರಾಪ್ತರು ವಾಹನ ಚಾಲನೆ ಮಾಡುತ್ತಿರುವುದು ಕಂಡುಬಂದಲ್ಲಿ, ಸಾರ್ವಜನಿಕರು ಆ ಕುರಿತಾದ ಫೋಟೋ, ವಿಡಿಯೋ ಹಾಗೂ ವಾಹನಕ್ಕೆ ಸಂಬಂಧಿಸಿದ ನಿಖರ ಮಾಹಿತಿಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕೃತ ವಾಟ್ಸಾಪ್ ಸಂಖ್ಯೆಗೆ ಕಳುಹಿಸುವ ಮೂಲಕ ಮಾಹಿತಿ ನೀಡಬೇಕು. ಇಂತಹ ಪ್ರಕರಣಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು
ಸಂಜೀವ್ ಕುಮಾರ್, ಶಿವಮೊಗ್ಗ ಜಿಲ್ಲಾ ಪೊಲೀಸ್ ಉಪ ಅಧೀಕ್ಷಕರು

ಈ ಸಭೆಯಲ್ಲಿ ಶಿವಮೊಗ್ಗ ಸಂಚಾರ ವೃತ್ತದ ಪೊಲೀಸ್ ನಿರೀಕ್ಷಕರಾದ ದೇವರಾಜ್, (Shivamogga traffic police) ಪೊಲೀಸ್ ಉಪನಿರೀಕ್ಷಕಿ ಸ್ವಪ್ನಾ ಎಲ್. ಹಾಗೂ ಪೊಲೀಸ್ ಇಲಾಖೆಯ ಇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor