Road Development in Shivamogga / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಸಂಸದ ಬಿ.ವೈ.ರಾಘವೇಂದ್ರ / ಶಿವಮೊಗ್ಗ ಅಭಿವೃದ್ಧಿ ಕೇಂದ್ರ ಸರ್ಕಾರ ಮತ್ತೊಮ್ಮೆ 68 ಕೋಟಿ ರೂಪಾಯಿ ಮಂಜೂರು ಮಾಡಿದೆ. ಈ ಬಗ್ಗೆ ಸ್ವತಃ ಸಂಸದ ಬಿ.ವೈ ರಾಘವೇಂದ್ರರವರು ತಿಳಿಸಿದ್ದಾರೆ. ವಿಚಾರದ ಬಗ್ಗೆ ಪ್ರಕಟಣೆ ನೀಡಿರುವ ಅವರು, ಕೇಂದ್ರ ಸರಕಾರವು ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ರಸ್ತೆ ಮತ್ತು ಮೂಲ ಸೌಕರ್ಯ ನಿಧಿಯಡಿ 68 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಯೋಜನೆಗೆ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಅವರ ಪ್ರಕಟಣೆಯ ಪೂರ್ಣ ಪಾಠ ಈ ಕೆಳಗಿದೆ.
ಸಂಸದ ಬಿ.ವೈ.ರಾಘವೇಂದ್ರರವರ ಪ್ರಕಟಣೆ
ಈ ಯೋಜನೆಯಡಿ ಒಟ್ಟು 13 ಪ್ರಮುಖ ಕಾಮಗಾರಿ ಮೂಲಕ ವಿವಿಧೆಡೆ ಒಟ್ಟು 84.78 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿಪಡಿಸಲಾಗುವುದು. ಜಿಲ್ಲೆಯ ಪ್ರಮುಖ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ರಸ್ತೆಯನ್ನು ಈ ಅನುದಾನದ ಮೂಲಕ ಮೇಲ್ದರ್ಜೆಗೇರಿಸಲಾಗುವುದು. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ, ಭದ್ರಾವತಿ, ಶಿಕಾರಿಪುರ, ಸೊರಬ, ಸಾಗರ, ತೀರ್ಥಹಳ್ಳಿ ಮತ್ತು ಬೈಂದೂರು ತಾಲೂಕುಗಳಲ್ಲಿಯೂ ನಿಗದಿತ ರಸ್ತೆ ಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಮರು ಡಾಂಬರೀಕರಣ ಮಾಡಲಾಗು ವುದು ಎಂದು ತಿಳಿಸಿದ್ದಾರೆ. ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಗಳ ಬಲವರ್ಧನೆ, ಸುಗಮ ಸಂಚಾರ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ಅನುದಾನ ಮಂಜೂರು ಮಾಡಿದೆ. ಎಂದಿದ್ದಾರೆ.
