ಶಿವಮೊಗ್ಗ: ಮಲಗಿದ್ದಲ್ಲಿಯೇ ಯುವಕನ ಭೀಕರ ಕೊಲೆ; ಪ್ರಕರಣ ದಾಖಲು

ಶಿವಮೊಗ್ಗ: ವ್ಯವಹಾರಿಕ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ. ಪ್ರವೀಣ್ (29) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.

ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೀತು ಇ-ಪೇಪರ್​ ಓದಿ

Shimoga ಘಟನೆಯ ವಿವರ

ಮೃತ ಪ್ರವೀಣ್ ಟ್ರಾಕ್ಟರ್ ಬಾಡಿಗೆ ಹಾಗೂ ಇತರ ಕೆಲಸಗಳನ್ನು ಮಾಡಿಕೊಂಡಿದ್ದರು. ಎಂದಿನಂತೆ ನಿನ್ನೆ ಬೆಳಿಗ್ಗೆ ಯುವಕರಿಗೆ ಕೆಲಸಕ್ಕೆ ಬರುವಂತೆ ತಿಳಿಸಿದ್ದರು. ಆದರೆ, ಬೆಳಿಗ್ಗೆ ಕೆಲಸಕ್ಕೆ ಬಂದ ಯುವಕರು ಎಷ್ಟೇ ಬಾರಿ ಫೋನ್ ಮಾಡಿದರೂ ಪ್ರವೀಣ್ ಕರೆ ಸ್ವೀಕರಿಸಿರಲಿಲ್ಲ.ಇದರಿಂದ ಅನುಮಾನಗೊಂಡ ಯುವಕರು ನೇರವಾಗಿ ಸ್ಥಳಕ್ಕೆ ಬಂದು ನೋಡಿದಾಗ ತೀವ್ರ ಆಘಾತ ಕಾದಿತ್ತು. ಪ್ರವೀಣ್ ಅವರ ಮೃತದೇಹವು ಮಚ್ಚಿನಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಪ್ರವೀಣ್ ಅವರನ್ನು ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಸದ್ಯ ಪ್ರವೀಣ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Shimoga Youth Praveen Brutally Murdered