Shivamogga short news / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ದಿನದ ಸಂಕ್ಷಿಪ್ತ ಸುದ್ದಿ / ಶಿವಮೊಗ್ಗ ಜಿಲ್ಲೆಯ ಠಾಣೆಯೊಂದರ ವ್ಯಾಪ್ತಿಯಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಾಲ್ಯ ವಿವಾಹವಾಗಿ, ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಕೋರ್ಟ್ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಪೋಕ್ಸೋ ಕೇಸ್ 20 ವರ್ಷ ಶಿಕ್ಷೆ
27 ವರ್ಷದ ಯುವಕನೊಬ್ಬ ಎಸಗಿದ್ದ ಈ ಕೃತ್ಯದ ಕುರಿತು ಪೋಕ್ಸೊ ಹಾಗೂ ಬಾಲ್ಯ ವಿವಾಹ ಭದ್ರಾವತಿಯಲ್ಲಿ ಬಾಲ್ಯ ವಿವಾಹಕ್ಕೆ ಬ್ರೇಕ್! ತೀರ್ಥಹಳ್ಳಿಯಲ್ಲಿ ಮತ್ತೊಂದು ವಿಡಿಯೋ ವೈರಲ್! ಶಿವಮೊಗ್ಗದಲ್ಲಿ ಅಶ್ಲೀಲ ಚಿತ್ರ ತೆಗೆದು ಬ್ಲ್ಯಾಕ್ಮೇಲ್! ಮಲವಗೊಪ್ಪದಲ್ಲಿ ಆಕ್ಸಿಡೆಂಟ್! TODAY@NEWSನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ರು. ಶಿವಮೊಗ್ಗದ ತ್ವರಿತ ಗತಿಯ ವಿಶೇಷ ನ್ಯಾಯಾಲಯದಲ್ಲಿ (ಎಫ್‌ಟಿಎಸ್‌ಸಿ-1) ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನಾಲ್ವರು ಆರೋಪಿತರಿಗೆ ತಲಾ 20 ವರ್ಷ ಕಠಿಣ ಜೈಲು ಶಿಕ್ಷೆಯೊಂದಿಗೆ ಒಟ್ಟು 1,85,000 ರೂಪಾಯಿ ದಂಡ ಹಾಗೂ ನೊಂದ ಬಾಲಕಿಗೆ 4,00,000 ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.
ನಾಡಬಂದೂಕು ತಯಾರಿಸ್ತಿದ್ದ ಅರೋಪಿ ಅರೆಸ್ಟ್
ಇನ್ನೊಂದು ಪ್ರತ್ಯೇಕ ಪ್ರಕರಣದಲ್ಲಿ, ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಲಾಪುರ ಗ್ರಾಮದಲ್ಲಿ ಅಕ್ರಮವಾಗಿ ನಾಡಬಂದೂಕು ತಯಾರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾಹಿತಿಯ ಮೇರೆಗೆ ತೀರ್ಥಹಳ್ಳಿ ಸರ್ಕಲ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 39 ವರ್ಷದ ಸುಧಾಕರ್ ಆಚಾರಿ ಎಂಬುವವನನ್ನು ದಸ್ತಗಿರಿ ಮಾಡಲಾಗಿದೆ. ದಾಳಿಯ ಸಂದರ್ಭದಲ್ಲಿ ಆರೋಪಿಯಿಂದ ಒಂದು ನಾಡಬಂದೂಕನ್ನು ವಶಪಡಿಸಿಕೊಂಡು, ಶಸ್ತ್ರಾಸ್ತ್ರ ಕಾಯ್ದೆ 1959ರ ಕಲಂ 3, 5 ಮತ್ತು 25ರ ಅಡಿ ಪ್ರಕರಣ (ಕ್ರೈಂ ನಂಬರ್ 187/2026) ದಾಖಲಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
112 ಶಿವಮೊಗ್ಗ ಸುದ್ದಿ (Shivamogga short news)
- ಇನ್ನೂ ಜಿಲ್ಲೆಯ 112 ಶಿವಮೊಗ್ಗ ಕೈಕೊಂಡ ಕಾರ್ಯಾಚರಣೆಗಳ ಬಗೆಗಿನ ವಿವರ ಹೀಗಿದೆ. ಜೂನ್ 20, 2026ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಜೋರಾಗಿ ಸೌಂಡ್ ಮಾಡುತ್ತಾ ಬೈಕ್ ಚಲಾಯಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಬಗ್ಗೆ ದೂರು ಬಂದಿದ್ದು, ಸ್ಥಳಕ್ಕೆ ತೆರಳಿದ ಸಿಬ್ಬಂದಿ ಆತನಿಗೆ ಸೂಕ್ತ ತಿಳುವಳಿಕೆ ಮತ್ತು ಎಚ್ಚರಿಕೆ ನೀಡಿದ್ದಾರೆ.
- ಜೂನ್ 19, 2026ರಂದು ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ ಮತ್ತು ಬೊಲೆರೊ ವಾಹನಗಳ ನಡುವೆ ಸಂಭವಿಸಿದ ಅಪಘಾತದ ಬಗ್ಗೆ ಕರೆ ಬಂದಿದ್ದು, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತೀವ್ರ ಗಾಯಗೊಂಡಿದ್ದ ಚಾಲಕರು ಆಸ್ಪತ್ರೆಗೆ ದಾಖಲಾಗಿದ್ದು, ವಾಹನಗಳನ್ನು ಟೋಯಿಂಗ್ ಮುಖಾಂತರ ಠಾಣೆಗೆ ರವಾನಿಸಿ ಕೇಸ್ ಕ್ಲೋಸ್ ಮಾಡಿದ್ಧಾರೆ.
- ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯೊಂದರಲ್ಲಿ ಪತ್ನಿಯ ಸಂಬಂಧಿಯೊಬ್ಬರು ನಿತ್ಯ ಕರೆ ಮಾಡಿ ಇಲ್ಲಸಲ್ಲದ ಆರೋಪ ಮಾಡುತ್ತಿರುವುದರಿಂದ ಪತ್ನಿ ತವರು ಮನೆಗೆ ಹೋಗಿರುವ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಸಿಬ್ಬಂದಿ ಎಚ್ಚರಿಕೆ ನೀಡಿದರೂ ಕೇಳದಿದ್ದಾಗ, ಎರಡೂ ಕಡೆಯವರು ಠಾಣೆಗೆ ಬಂದು ದೂರು ನೀಡಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ತಿಳುವಳಿಕೆ ನೀಡಿದ್ದಾರೆ.
ನಿಮ್ಮ ವಾಟ್ಸಾಪ್ಗೆ ಸುದ್ದಿ ಕಳುಹಿಸಲು ಕ್ಲಿಕ್ ಮಾಡಿ ಗ್ರೂಪ್ಗೆ ಜಾಯಿನ್ ಆಗಿ : Whatsapp / https://chat.whatsapp.com/JrsZ8He4nN600n0r3tJItz
