ಶಿವಮೊಗ್ಗಕ್ಕೆ ಜಾರ್ಜ್, ತುಮಕೂರಿಗೆ ಪರಮೇಶ್ವರ್​, ವಿಕೋಪ ನಿರ್ವಹಣೆ ಉಸ್ತುವಾರಿ ಪಟ್ಟಿ ಪ್ರಕಟ

ಹಂಚಿಕೊಳ್ಳಿ
WhatsApp Facebook X Telegram
Elephant Mahout Recruitment 2026

Ministers for Disaster Management / ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ರಾಜ್ಯ ಸರ್ಕಾರ ಶಿವಮೊಗ್ಗವೂ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಪ್ರಕೃತಿ ವಿಕೋಪ ನಿರ್ವಹಣೆಯ ಉಸ್ತುವಾರಿ ಸಚಿವರನ್ನ ನೇಮಿಸಿದೆ. ಈ ಸಂಬಂಧ ಆದೇಶ ಹೊರಬಿದ್ದಿದೆ.

ಮಳೆ ಹಿನ್ನೆಲೆಯಲ್ಲಿ ಸಂಭವಿಸುವ ಪ್ರಕೃತಿ ವಿಕೋಪಗಳ ನಿರ್ವಹಣೆಯ ಮೇಲುಸ್ತುವಾರಿಗಾಗಿ ಉಪ ಮುಖ್ಯಮಂತ್ರಿ ಹಾಗೂ ವಿವಿಧ ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿಯನ್ನು ಹಂಚಿಕೆ ಮಾಡಿ ರಾಜ್ಯ ಸರ್ಕಾರ ಜೂನ್ 24, 2026 ರಂದು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬರಲಿದೆ. ಅಲ್ಲದೆ ಮುಂದಿನ ಆದೇಶದವರೆಗೆ ಅನ್ವಯವಾಗಲಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಎಸ್. ಶ್ರೀನಿವಾಸ್ ಅವರು ರಾಜ್ಯಪಾಲರ ಆದೇಶಾನುಸಾರ ಈ ಅಧಿಸೂಚನೆ ಹೊರಡಿಸಿದ್ದಾರೆ.

ಹೊರಬಿದ್ದಿರುವ ಆದೇಶದಂತೆ ಡಿಸಿಎಂ ಡಾ. ಜಿ. ಪರಮೇಶ್ವರ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಕೆ. ಎಚ್. ಮುನಿಯಪ್ಪ ಅವರು ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದೆ.

ಎಂ. ಬಿ. ಪಾಟೀಲ್ ಅವರು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಜವಾಬ್ದಾರಿ ವಹಿಸಿಕೊಂಡರೆ, ಕೆ. ಜೆ. ಜಾರ್ಜ್ ಅವರಿಗೆ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಮೇಲುಸ್ತುವಾರಿ ನೀಡಲಾಗಿದೆ. ಕೃಷ್ಣ ಬೈರೇಗೌಡ ಅವರು ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆಗಳ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಈಶ್ವರ್ ಖಂಡ್ರೆ ಅವರಿಗೆ ಬೀದರ್ ಮತ್ತು ಗದಗ್ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದೆ.

ಸತೀಶ್ ಜಾರಕಿಹೊಳಿ ಅವರು ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಉಸ್ತುವಾರಿ ವಹಿಸಲಿದ್ದಾರೆ. ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಹೊಣೆಗಾರಿಕೆ ನೀಡಲಾಗಿದೆ. ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಮೇಲುಸ್ತುವಾರಿ ನೋಡಿಕೊಳ್ಳಲಿದ್ದಾರೆ.

ಯು. ಟಿ. ಖಾದರ್ ಫರೀದ್ ಅವರಿಗೆ ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ಬೈರತಿ ಸುರೇಶ್ ಅವರು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಉಸ್ತುವಾರಿ ವಹಿಸಲಿದ್ದು, ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಜವಾಬ್ದಾರಿಯನ್ನು ವಹಿಸಲಾಗಿದೆ.

ನಿಮ್ಮ ವಾಟ್ಸಾಪ್​ಗೆ ಸುದ್ದಿ ಕಳುಹಿಸಲು ಕ್ಲಿಕ್​ ಮಾಡಿ ಗ್ರೂಪ್​ಗೆ ಜಾಯಿನ್ ಆಗಿ :  Whatsapp / https://chat.whatsapp.com/JrsZ8He4nN600n0r3tJItz

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor