72,186 ಖಾಲಿ ಹುದ್ದೆಗಳ ನೇಮಕಾತಿ: ಉನ್ನತ ಅಧಿಕಾರಿಗಳ ನೇಮಕ

ಹಂಚಿಕೊಳ್ಳಿ
WhatsApp Facebook X Telegram
informaion news
informaion news

High Level Officers / ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮೇಲುಸ್ತುವಾರಿಗಾಗಿ ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಿಸಿ ಜೂನ್ 24, 2026 ರಂದು ನಡವಳಿಯನ್ನು ಹೊರಡಿಸಲಾಗಿದೆ. ನಡವಳಿಯ ವಿವರ ಹೀಗಿದೆ.

  • ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 72,186 ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದನೆ ನೀಡಲಾಗಿದೆ.
  • ಈ ಪೈಕಿ 2023-24 ನೇ ಸಾಲಿನಿಂದ ಇಲ್ಲಿಯವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40,009 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತಿ ನೀಡಿದೆ.
  • ಜೊತೆಗೆ, ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳ ಪೈಕಿ ಶೇಕಡಾ 80 ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯು ಈಗಾಗಲೇ ಪರಿಭಾವಿತ ಸಹಮತಿ ನೀಡಿರುತ್ತದೆ.

ಈ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಆಯ್ಕೆ ಪ್ರಾಧಿಕಾರಗಳಿಂದ ಕ್ರಿಯಾ ಯೋಜನೆಗಳನ್ನು ಪಡೆದು ಸಚಿವ ಸಂಪುಟದ ಅನುಮೋದನೆಗೆ ಮಂಡಿಸಲಾಗಿತ್ತು. ಸಚಿವ ಸಂಪುಟ ಇದಕ್ಕೆ ಒಪ್ಪಿಗೆ ಸೂಚಿಸಿದೆ. ಸರ್ಕಾರದ ಆದೇಶ ಸಂಖ್ಯೆ CS/21/GEN/2026 ರನ್ವಯ, 17 ಇಲಾಖೆಗಳಲ್ಲಿನ ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕಾದ ಹುದ್ದೆಗಳನ್ನು ತ್ವರಿತಗತಿಯಲ್ಲಿ ಭರ್ತಿ ಮಾಡಲು ಮೇಲುಸ್ತುವಾರಿಗಾಗಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಿಗೆ ಜವಾಬ್ದಾರಿ ನೀಡಲಾಗಿದೆ.

ಅದೇ ರೀತಿ, 34 ಇಲಾಖೆಗಳಲ್ಲಿನ ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕಾದ ಖಾಲಿ ಹುದ್ದೆಗಳನ್ನು ತ್ವರಿತ ಗತಿಯಲ್ಲಿ ಭರ್ತಿ ಮಾಡುವ ಕುರಿತು ಮೇಲುಸ್ತುವಾರಿ ಮಾಡಲು ಕರ್ನಾಟಕ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಜವಾಬ್ದಾರಿ ನೀಡಿ ಆದೇಶಿಸಲಾಗಿದೆ.

ನಿಮ್ಮ ವಾಟ್ಸಾಪ್​ಗೆ ಸುದ್ದಿ ಕಳುಹಿಸಲು ಕ್ಲಿಕ್​ ಮಾಡಿ ಗ್ರೂಪ್​ಗೆ ಜಾಯಿನ್ ಆಗಿ :  Whatsapp / https://chat.whatsapp.com/JrsZ8He4nN600n0r3tJItz

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor