ಭದ್ರಾವತಿಗೆ ಬರುತ್ತಿದ್ದ ಸಯ್ಯದ್ ಮುಬಾರಕ್​ನನ್ನು ಅಡ್ಡಗಟ್ಟಿದ ಪೊಲೀಸರು! ಮಾಲು ಸಮೇತ ಅರೆಸ್ಟ್!

ಹಂಚಿಕೊಳ್ಳಿ
WhatsApp Facebook X Telegram
shimoga chikkamagaluru malnad crime news Annanagar Wife Conspires to Murder Husband in Shivamogga
shimoga chikkamagaluru Wife chikkamagaluru Conspires to Murder Husband in Shivamogga

Ganja Seized in Bhadravathi / ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆಯ ಲಿಮಿಟ್ಸ್​ನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಿನಾಂಕ 24-06-2026 ರಂದು ಶೆಟ್ಟಿಹಳ್ಳಿ ಗ್ರಾಮದ ಸಮೀಪ ಈ ಘಟನೆ ನಡೆದಿದೆ. ಘಟನೆ ವಿವರ ಹೀಗಿದೆ.

ಶೆಟ್ಟಿಹಳ್ಳಿಯಿಂದ ತಡಸ ಮಾರ್ಗದ ಮೂಲಕ ಭದ್ರಾವತಿ ಕಡೆಗೆ ವ್ಯಕ್ತಿಯೊಬ್ಬ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಗ್ರಾಮಾಂತರ ಪೊಲೀಸ್ ಠಾಣೆಗೆ ಇನ್ಫಾರ್ಮೆಶನ್ ಬಂದಿತ್ತು. ಈ ನಿಟ್ಟಿನಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಇನ್​ಸ್ಪೆಕ್ಟರ್​ ಚಿದಾನಂದ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು. ಈ ಕಾರ್ಯಾಚರಣೆಯ್ಲಿ 31 ವರ್ಷದ ಸಯ್ಯದ್ ಮುಬಾರಕ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದ್ದು, ಆತನ ಬಳಿ ಇದ್ದ ಸುಮಾರು 43,900 ರೂಪಾಯಿ ಮೌಲ್ಯದ ಒಟ್ಟು 878 ಗ್ರಾಂ ತೂಕದ ಗಾಂಜಾ ಅಮಾನತ್ತುಪಡಿಸಿಕೊಂಡಿದ್ದಾರೆ.

ಇನ್ನೂ ಗಾಂಜಾ ಮಾರಾಟದ ಸಂಬಂಧ ಸಯ್ಯದ್ ಮುಬಾರಕ್ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1985 ರ ನಾರ್ಕೋಟಿಕ್ ಡ್ರಗ್ಸ್ ಅಂಡ್ ಸೈಕೋಟ್ರೋಪಿಕ್ ಸಬ್‌ಸ್ಟೆನ್ಸಸ್ (NDPS) ಕಾಯ್ದೆಯ ಕಲಂ 20(b) (ii) A, 8(c) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದ್ದು ತನಿಖೆ ಮುಂದುವರಿದಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor