news in shivamogga / ಮಲೆನಾಡು ಟುಡೆ ಸುದ್ದಿ / ನಿನ್ನೆ ದಿನದ ನಡೆದ ಪ್ರತ್ಯೇಕ ಘಟನೆಗಳಲ್ಲಿ ಹೊಸನಗರದಲ್ಲಿ ಲಾರಿ ಹಾಗೂ ಹೊಳೆಹೊನ್ನೂರು ಸಮೀಪ ಕಾರೊಂದು ಮಗುಚಿ ಬಿದ್ದಿರುವೆ ಘಟನೆ ಬಗ್ಗೆ ವರದಿ ಲಭ್ಯವಾಗಿದೆ. ಅದರ ವಿವರ ಹೀಗಿದೆ.
ಹೊಸನಗರ ಕೋಟೆ ಕೆರೆಗೆ ಬಿದ್ದ ಲಾರಿ
ನಗರದ ಬಿದನೂರು ಕೋಟೆ ಕೆರೆ ಸಮೀಪ ಮರದ ತುಂಡುಗಳಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ನಿನ್ನೆ ಅಂದರೆ ಜೂನ್ 28ರ ಸಂಜೆ ಶಿವಮೊಗ್ಗದಿಂದ ಕುಂದಾಪುರದತ್ತ ಸಾಗುತ್ತಿದ್ದ ಲಾರಿಯು ಎದುರಿನಿಂದ ಬರುತ್ತಿದ್ದ ಬಸ್‌ಗೆ ಸೈಡ್ ನೀಡಲು ಮುಂದಾದಾಗ ನಿಯಂತ್ರಣ ತಪ್ಪಿಗೆ ಕೆರೆಗೆ ಉರುಳಿದೆ. ಘಟನೆಯಲ್ಲಿ ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ವಾಹನದೊಳಗೆ ಸಿಲುಕಿಕೊಂಡಿದ್ದ. ಸ್ಥಳೀಯರು ಆತನನ್ನು ಸೇವ್ ಮಾಡಿದ್ದಾರೆ.
ಹೆದ್ದಾರಿಯಲ್ಲಿ ಪಲ್ಟಿಯಾದ ಕಾರು: ಬೆಂಗಳೂರಿನ ದಂಪತಿ, ಮಕ್ಕಳು ಪಾರು
ಇತ್ತ ಶಿವಮೊಗ್ಗ – ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯ ಕೆರೆಬೀರನಹಳ್ಳಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿಬಿದ್ದಿದೆ. ಕಾರಿನಲ್ಲಿದ್ದ ಬೆಂಗಳೂರು ಮೂಲದ ದಂಪತಿ ಹಾಗೂ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸುತ್ತಿದ್ದಾಗ ಕೆರೆಬೀರನಹಳ್ಳಿ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ವಾಟ್ಸಾಪ್ಗೆ ಸುದ್ದಿ ಕಳುಹಿಸಲು ಕ್ಲಿಕ್ ಮಾಡಿ ಗ್ರೂಪ್ಗೆ ಜಾಯಿನ್ ಆಗಿ : Whatsapp / https://chat.whatsapp.com/JrsZ8He4nN600n0r3tJItz





