ಭದ್ರಾ ಎಡದಂಡೆ, ಬಲದಂಡೆ ನಾಲೆಗಳಿಗೆ ನೀರು ಬಂದ್! ಕಾರಣ ಇಲ್ಲಿದೆ

ಹಂಚಿಕೊಳ್ಳಿ
WhatsApp Facebook X Telegram
Bhadra dam image for normal use malenadutoday
Upper Bhadra Project

Bhadra Reservoir Water / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ವಾಡಿಕೆಯಂತೆ ಮಳೆಯಾಗದ ಕಾರಣ ಭದ್ರಾ ಅಣೆಕಟ್ಟಿನಲ್ಲಿ ನಿರೀಕ್ಷಿತ ಪ್ರಮಾಣದ ನೀರು ಸಂಗ್ರಹವಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಎಡದಂಡೆ ಹಾಗೂ ಬಲದಂಡೆ ನಾಲೆಗಳ ಮೂಲಕ ನೀರು ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ವಾರ್ತಾಇಲಾಖೆಯ ಮೂಲಕ ಇಂದು ಗುರುವಾರ ಪ್ರಕಟಣೆಯನ್ನು ಹೊರಡಿಸಿದ್ದು, ಪ್ರಕಟಣೆಯಲ್ಲಿ ವಿಷಯದ ಕುರಿತಾಗಿ ವಿವರಿಸಿದ್ದಾರೆ. ಜಲಾಶಯದಲ್ಲಿ ಪ್ರಸ್ತುತ ಲಭ್ಯವಿರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಮೀಸಲಿಡಬೇಕು ಎಂದು ಸರ್ಕಾರ ನಿರ್ದೇಶನ ನೀಡಿದೆ. ಸರ್ಕಾರದ ಈ ಆದೇಶವನ್ನು ಪಾಲಿಸುವ ನಿಟ್ಟಿನಲ್ಲಿ ಅಚ್ಚುಕಟ್ಟು ವ್ಯಾಪ್ತಿಯ ರೈತ ಸಮುದಾಯವು ನೀರಾವರಿ ಇಲಾಖೆಯೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮುಂಬರುವ ದಿನಗಳಲ್ಲಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಭದ್ರಾ ಅಣೆಕಟ್ಟು ಭರ್ತಿಯಾದರೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ಆ ಸಂದರ್ಭದಲ್ಲಿ ನೀರಾವರಿ ಸಲಹಾ ಸಮಿತಿಯ ಸಭೆಯನ್ನು ಕರೆದು, ಕೃಷಿ ಬೆಳೆಗಳಿಗೆ ನೀರು ಹರಿಸುವ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ನಿಮ್ಮ ವಾಟ್ಸಾಪ್​ಗೆ ಸುದ್ದಿ ಕಳುಹಿಸಲು ಕ್ಲಿಕ್​ ಮಾಡಿ ಗ್ರೂಪ್​ಗೆ ಜಾಯಿನ್ ಆಗಿ :  Whatsapp / https://chat.whatsapp.com/JrsZ8He4nN600n0r3tJItz

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor