1077 ಪ್ರಕರಣ ಇತ್ಯರ್ಥ! ಇವತ್ತಿನ ಮಲೆನಾಡು ಇ ಪತ್ರಿಕೆಯಲ್ಲಿ ಶಿವಮೊಗ್ಗ ಸುದ್ದಿ ಓದಿ

ಹಂಚಿಕೊಳ್ಳಿ
WhatsApp Facebook X Telegram
malenadu today epaper
malenadu today epaper

Malenadu Today E Paper / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ನಗರದಲ್ಲಿ ಗಾಂಜಾ ವ್ಯಸನಿಯೊಬ್ಬ ತನ್ನ ಅಜ್ಜಿಯನ್ನೇ ಬರ್ಬರವಾಗಿ ಹತ್ಯೆಗೈದಿದ್ದು, ಆರೋಪಿಯನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೇ ಆತ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಹಾಗೂ ಸಿಬ್ಬಂದಿಯ ರಕ್ಷಣೆಗಾಗಿ ಮೊದಲು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ, ಬಳಿಕ ಆರೋಪಿಯ ಎಡಗಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಈ ಸುದ್ದಿ ಇವತ್ತಿನ ಈ ಪೇಪರ್​ನ ಲೀಡ್ ಸುದ್ದಿಯಾಗಿದೆ.

  • ಮತ್ತೊಂದೆಡೆ, ಮಲೆನಾಡು ಭಾಗದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿ ಹೋರಾಟವನ್ನು ಹತ್ತಿಕ್ಕಲು ಅಧಿಕಾರಿಗಳು ಹಾಗೂ ಖಾಸಗಿ ಸಂಸ್ಥೆಗಳು ವಾಮಮಾರ್ಗ ಅನುಸರಿಸುತ್ತಿದ್ದಾರೆ ಎಂದು ಬಂಗಾರಮಕ್ಕಿ ಗುರೂಜಿ ಗಂಭೀರ ಆರೋಪ ಮಾಡಿದ್ದಾರೆ.
  • ರಾಜ್ಯದಲ್ಲಿ ಎಲ್ ನಿನೋ ಹವಾಮಾನ ವೈಪರೀತ್ಯದ ಪ್ರಭಾವದಿಂದಾಗಿ ಮಳೆ ಕೊರತೆಯಾಗಿದ್ದು, ಭದ್ರಾ ಜಲಾಶಯದಲ್ಲಿ ನಿರೀಕ್ಷಿತ ಪ್ರಮಾಣದ ನೀರು ಸಂಗ್ರಹವಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಎಡದಂಡೆ ಹಾಗೂ ಬಲದಂಡೆ ನಾಲೆಗಳ ಮೂಲಕ ನೀರು ಹರಿಸದಿರಲು ನೀರಾವರಿ ಇಲಾಖೆ ಅಧಿಕಾರಿಗಳು ತೀರ್ಮಾನಿಸಿದ್ದಾರೆ.
  • ಶಿವಮೊಗ್ಗ ನಗರದಲ್ಲಿ ಸಂಚಾರಿ ಇ-ಚಲನ್ ಪ್ರಕರಣಗಳಿಗೆ ಸಂಬಂಧಿಸಿದಂತೆ ದಂಡ ಪಾವತಿಗೆ ಶೇಕಡಾ 50ರಷ್ಟು ರಿಯಾಯಿತಿ ನೀಡಿರುವುದು ವಾಹನ ಸವಾರರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದ್ದು, 1077 ಪ್ರಕರಣಗಳು ಇತ್ಯರ್ಥಗೊಂಡು 46,06,500 ರೂಪಾಯಿ ದಂಡ ಸಂಗ್ರಹವಾಗಿದೆ.
  • ಇನ್ನು, ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರ ಪ್ರತಿಭಟನೆ ಇಂದಿನ ‘ಮಲೆನಾಡು ಟುಡೆ’ ಪತ್ರಿಕೆಯ ಸಾರಾಂಶ

ಕೆಳಗೆ ನೀಡಲಾಗಿರುವ ಗೂಗಲ್ ಡ್ರೈವ್ ಲಿಂಕ್ ಮೇಲೆ ಕ್ಲಿಕ್ ಮಾಡುವ ಮೂಲಕ ಪತ್ರಿಕೆಯನ್ನು ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಪರದೆಯ ಮೇಲೆ ನೇರವಾಗಿ ಓದಬಹುದು. ಪತ್ರಿಕೆಯ ಪಿಡಿಎಫ್ ಪ್ರತಿಯನ್ನು ನಿಮ್ಮ ಸಾಧನಕ್ಕೆ ಡೌನ್‌ಲೋಡ್ ಮಾಡಿಕೊಳ್ಳಲು ಲಿಂಕ್ ತೆರೆದ ನಂತರ ಮೇಲ್ಭಾಗದಲ್ಲಿ ಕಾಣುವ ಡೌನ್‌ಲೋಡ್ ಚಿಹ್ನೆಯನ್ನು ಒತ್ತಿದರೆ ಸಾಕು, ಇ-ಪೇಪರ್ ನಿಮ್ಮ ಮೊಬೈಲ್‌ನಲ್ಲಿ ಶಾಶ್ವತವಾಗಿ ಉಳಿಯುತ್ತದೆ.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor