ಶಿವಮೊಗ್ಗದಲ್ಲಿ ಕರೆಂಟ್ ಇರಲ್ಲ : ಇವತ್ತು, ನಾಳೆ, ನಾಡಿದ್ದು ಪವರ್ ಕಟ್, ಎಲ್ಲೆಲ್ಲಿ ಗಮನಿಸಿ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut ವPower Cut in Shivamogga Check Affected Areas Power Cut Bhadravati Power Scheduled power cuts Power cut in Bhadravatipower Shikaripura  Power Outage july 27

Power cut in Shivamogga | ಮಲೆನಾಡು ಟುಡೆ | ಶಿವಮೊಗ್ಗ | ಜುಲೈ 3, 2026 | ಮೆಸ್ಕಾಂ ಶಿವಮೊಗ್ಗ ನೀಡಿರುವ ಅಧಿಕೃತ ಪ್ರಕಟಣೆಯ ಪ್ರಕಾರ, ಜಿಲ್ಲೆಯಲ್ಲಿ ಇವತ್ತು ನಾಳೆ ಮತ್ತು ನಾಡಿದ್ದು ವಿವಿಧ ಪ್ರದೇಶಗಳಲ್ಲಿ ಕರೆಂಟ್​ ಇರಲ್ಲ. ಮೆಸ್ಕಾಂ ನಿರ್ವಹಣಾ ಕಾಮಗಾರಿಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ ಇವತ್ತು ಅಂದರೆ ಜುಲೈ 3, ಜುಲೈ 4 ಮತ್ತು 5ರಂದು ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಹೆಚ್ಚಿನ ವಿವರ ಹೀಗಿದೆ

ಇವತ್ತು ಸೋಮಯ್ಯ ಲೇಔಟ್ ಸುತ್ತಮುತ್ತ ಕರೆಂಟ್ ಇರಲ್ಲ

ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಇವತ್ತು ಅಂದರೆ ಜು.03 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಸೋಮಯ್ಯ ಲೇಔಟ್, ಟಿಜಿಎನ್ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಜೋಸೆಫ್ ನಗರ, ಮೀನಾಕ್ಷಿ ಭವನ ರಸ್ತೆ, ಬಾಪೂಜಿಗರ, ಯಮಹ ಶೋರೂಮ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ

ಜುಲೈ 4ರಂದು ವಿದ್ಯುತ್ ವ್ಯತ್ಯಯ

ಮೆಸ್ಕಾಂ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಜುಲೈ 4ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳನ್ನು ಗಮನಿಸುವುದಾದರೆ, ಜಯನಗರ ಮುಖ್ಯರಸ್ತೆ, ಮೆಟ್ರೋ ಆಸ್ಪತ್ರೆ ರಸ್ತೆ, ನೆಹರೂ ಕ್ರೀಡಾಂಗಣ ರಸ್ತೆ, ಸರ್ವೋದಯ ಶಾಲೆ ರಸ್ತೆ, ಬಸವನಗುಡಿ, ಶಿವಮೂರ್ತಿ ಸರ್ಕಲ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ಕರೆಂಟ್ ಇರಲ್ಲ.

ಜುಲೈ 5ರಂದು ವಿದ್ಯುತ್ ವ್ಯತ್ಯಯ

ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯಲಿದೆ. ಹೀಗಾಗಿ ಜುಲೈ 5 ರಂದು ಬೆಳಗ್ಗೆ 9 ಗಂಟೆಯಿಂದಯೇ ಕರೆಂಟ್ ಹೋಗಲಿದೆ. ಸಂಜೆ 6 ಗಂಟೆಯವರೆಗೆ ವಿದ್ಯುತ್ ಸ್ಥಗಿತಗೊಳ್ಳಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರಮುಖ ಪ್ರದೇಶಗಳು

ಗಾಂಧಿನಗರ, ರವೀಂದ್ರ ನಗರ, ವೆಂಕಟೇಶ್‌ನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರ ನಗರ, ಎ.ಎನ್.ಕೆ ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿ ರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್​

ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರಿಯಲ್ ಎರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಸಹ್ಯಾದ್ರಿನಗರ, ಸಹಕಾರಿ ನಗರ, ಆಲ್ಕೋಳ ವೃತ್ತ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಶ್ರೀರಾಮನಗರ

ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ (ಎ ನಿಂದ ಎಫ್ ಬ್ಲಾಕ್), ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜು, ಮಲ್ಲಿಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ

ದೇವಕಾತಿಕೊಪ್ಪ, ಶ್ರೀರಾಮ್‌ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸೆಟ್ ಕಾಲೇಜ್, ಕೋಟೆ ಗಂಗೂರು, ಬಸವ ಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಜೆ.ಹೆಚ್. ಪಟೇಲ್ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್ ಮತ್ತು ಇಂದಿರಾಗಾಂಧಿ ಲೇಔಟ್. ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಈ ಅವಧಿಯಲ್ಲಿ ಮೆಸ್ಕಾಂಗೆ ಸಹಕರಿಸುವಂತೆ ಕೋರಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor