ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಅರಳಗುಪ್ಪೆ ಹಾಲ್ಟ್ ಮತ್ತು ಹಳ್ಳಿಗುಡಿ ರೈಲ್ವೆ ನಿಲ್ದಾಣಗಳಲ್ಲಿ ಸದ್ಯ ಜಾರಿಯಲ್ಲಿರುವ ರೈಲುಗಳ ತಾತ್ಕಾಲಿಕ ಒಂದು ನಿಮಿಷದ ನಿಲುಗಡೆಯನ್ನು ಜುಲೈ 1, 2026 ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
SWR Train ಯಾವೆಲ್ಲಾ ರೈಲುಗಳ ನಿಲುಗಡೆ ಮುಂದುವರಿಕೆ?
ರೈಲ್ವೆ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ, ರೈಲು ಸಂಖ್ಯೆ 16239/16240 ಚಿಕ್ಕಮಗಳೂರು–ಯಶವಂತಪುರ–ಚಿಕ್ಕಮಗಳೂರು ಕಾಯ್ದಿರಿಸದ ಎಕ್ಸ್‌ಪ್ರೆಸ್ ರೈಲು ಅರಳಗುಪ್ಪೆ ಹಾಲ್ಟ್ ನಿಲ್ದಾಣದಲ್ಲಿ ತನ್ನ ನಿಲುಗಡೆಯನ್ನು ಮುಂದುವರಿಸಲಿದೆ. ಇದರೊಂದಿಗೆ, ರೈಲು ಸಂಖ್ಯೆ 56927/56928 ಎಸ್‌ಎಸ್‌ಎಸ್ ಹುಬ್ಬಳ್ಳಿ–ಸಿಂಧನೂರು–ಎಸ್‌ಎಸ್‌ಎಸ್ ಹುಬ್ಬಳ್ಳಿ ಪ್ಯಾಸೆಂಜರ್ ರೈಲು ಹಳ್ಳಿಗುಡಿ ನಿಲ್ದಾಣದಲ್ಲಿ ನಿಲ್ಲಲಿದೆ.
ಈ ಎರಡೂ ರೈಲುಗಳು ಆಯಾ ನಿಲ್ದಾಣಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಿತ ವೇಳಾಪಟ್ಟಿಯಂತೆಯೇ ತಲಾ ಒಂದು ನಿಮಿಷಗಳ ಕಾಲ ನಿಲುಗಡೆ ನೀಡಲಿವೆ. ಸಾರ್ವಜನಿಕರು ಹಾಗೂ ದಿನನಿತ್ಯ ಪ್ರಯಾಣಿಸುವ ಪ್ರಯಾಣಿಕರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಗಿರೀಶ ಧರ್ಮರಾಜ ಕಲಗೊಂಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



