ಅಸ್ವಸ್ಥನಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿ ಸಾವು, ವಾರಸುದಾರರ ಪತ್ತೆಗೆ ಮನವಿ

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

ಶಿವಮೊಗ್ಗ | ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಡಿ.ವಿ.ಎಸ್. ಸರ್ಕಲ್ ಬಳಿಯ ಗಾಂಧಿ ಪಾರ್ಕ್ ಹತ್ತಿರ ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ಮೃತರ ವಾರಸುದಾರರ ಪತ್ತೆಗಾಗಿ ಪೊಲೀಸರು ಸಾರ್ವಜನಿಕರ ಸಹಾಯ ಕೋರಿದ್ದಾರೆ.

Unidentified Man ಘಟನೆ ವಿವರ

ಕಳೆದ ಜೂನ್ 12 ರಂದು ಸುಮಾರು 40 ರಿಂದ 45 ವರ್ಷ ವಯಸ್ಸಿನ ರಮೇಶ್ ಬಿನ್ ಶಿವಾನಂದಪ್ಪ ಎಂಬ ಹೆಸರಿನ ವ್ಯಕ್ತಿಯೊಬ್ಬರು ಗಾಂಧಿ ಪಾರ್ಕ್ ಬಳಿ ತೀವ್ರ ಅಸ್ವಸ್ಥರಾಗಿ ಬಿದ್ದಿದ್ದರು. ಇದನ್ನು ಗಮನಿಸಿದ ಸಾರ್ವಜನಿಕರು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಅವರನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ದುರದೃಷ್ಟವಶಾತ್ ಜೂನ್ 23 ರಂದು ಚಿಕಿತ್ಸೆಗೆ ಸ್ಪಂದಿಸದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರ ಬಳಿ ಅವರ ನಿಖರವಾದ ವಿಳಾಸವಾಗಲಿ ಅಥವಾ ವಾರಸುದಾರರ ಬಗ್ಗೆ ಯಾವುದೇ ರೀತಿಯ ಸುಳಿವು ಲಭ್ಯವಾಗಿಲ್ಲ.

ಮೃತರ ಚಹರೆ ವಿವರ

ಮೃತ ವ್ಯಕ್ತಿಯು ಸುಮಾರು 5.6 ಅಡಿ ಎತ್ತರ, ದುಂಡು ಮುಖ, ದೃಢವಾದ ಮೈಕಟ್ಟು ಹಾಗೂ ಎಣ್ಣೆಗೆಂಪು ಮೈಬಣ್ಣವನ್ನು ಹೊಂದಿದ್ದಾರೆ. ಅಸ್ವಸ್ಥರಾಗಿದ್ದ ಸಮಯದಲ್ಲಿ ಅವರು ತೆಳು ಗುಲಾಬಿ ಬಣ್ಣದ ತುಂಬು ತೋಳಿನ ಶರ್ಟ್ ಮತ್ತು ಕಂದು ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮೃತ ವ್ಯಕ್ತಿಯ ಕುಟುಂಬಸ್ಥರು ಅಥವಾ ವಾರಸುದಾರರ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವು ದೊರೆತಲ್ಲಿ ಸಾರ್ವಜನಿಕರು ತಕ್ಷಣವೇ ಶಿವಮೊಗ್ಗ ಕೋಟೆ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 08182-261415 ಗೆ ಸಂಪರ್ಕಿಸಿ ಮಾಹಿತಿ ನೀಡಬೇಕಾಗಿ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ. 

Unidentified Man Dies in Shimoga McGann Hospital

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor