THIRTHAHALLI

ತೀರ್ಥಹಳ್ಳಿ: ಗಾಳಿ ಸಹಿತ ಮಳೆಗೆ ಮನೆಯ ಮೇಲೆ ಬಿದ್ದ ಬೃಹತ್ ಮರ; ತಪ್ಪಿದ ಭಾರಿ ಅನಾಹುತ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

thirthahalli Rains ತೀರ್ಥಹಳ್ಳಿ: ತಾಲೂಕಿನಾದ್ಯಂತ ಭಾನುವಾರ ಸುರಿದ ಗಾಳಿ ಸಹಿತ ಮಳೆ ಭಾರಿ ಅವಾಂತರವನ್ನೇ ಸೃಷ್ಟಿಸಿದೆ. ಗಾಳಿಯ ರಭಸಕ್ಕೆ ಬೃಹತ್ ಗಾತ್ರದ ಮರವೊಂದು ಬುಡಸಮೇತ ಮನೆ ಮೇಲೆ ಬಿದ್ದಿರುವ ಘಟನೆ ತಾಲೂಕಿನ ಕೆರೋಡಿಯಲ್ಲಿ ಸಂಭವಿಸಿದೆ.

ಶಿವಮೊಗ್ಗ: ಕಾಂಗ್ರೆಸ್ ಹಾಗೂ ಎನ್.ಎಸ್.ಯು.ಐ. ಬೃಹತ್ ಪ್ರತಿಭಟನೆ, ಸಾವಿರಾರು ವಿದ್ಯಾರ್ಥಿಗಳು ಭಾಗಿ

ನಿನ್ನೆ ಸಂಜೆ 4 ಗಂಟೆ ವೇಳೆಗೆ, ಗಾಳಿಯ ರಭಸಕ್ಕೆ ಗ್ರಾಮದ ಜಯರಾಮ್ ಎಂಬುವವರ ಮನೆಯ ಮೇಲೆ ಬೃಹತ್ ಗಾತ್ರದ ರಂಜದ ಮರವೊಂದು ಬಿದ್ದಿದೆ. ಪರಿಣಾಮ ಮನೆಯ ಪೋರ್ಟಿಕೋ ಭಾಗವು ಸಂಪೂರ್ಣವಾಗಿ ಶಿಥಿಲಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿದರು, ಆದರೆ ಮರ ಬೃಹದ್ ಗಾತ್ರದಾಗಿದ್ದರಿಂದ ಮರವನ್ನು ತೆರವು ಗೊಳಿಸಲು ಹರಸಾಹಸವೇ ಪಡಬೇಕಾಯಿತು. ನಂತರ ಮರ ಕಟಾವು ಯಂತ್ರದ ಸಹಾಯದಿಂದ ಬಿದ್ದ ಮರವನ್ನು ತೆರವುಗೊಳಿಸಿದರು.

ಅದೃಷ್ಟವಶಾತ್, ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅರಣ್ಯ ಇಲಾಖೆ ಸೇರಿದಂತೆ ಇನ್ನಿತರೇ ಸಂಬಂಧ ಪಟ್ಟ ಅಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದರು.

thirthahalli Rains Tree Collapses on House in Kerodi

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.