SIR ಪ್ರಕ್ರಿಯೆ ವೇಳೆ ಕುಸಿದು ಬಿದ್ದ ಮಹಿಳಾ BLO ಸಾವು ; ಭದ್ರಾವತಿಯಲ್ಲಿ ಘಟನೆ

ಹಂಚಿಕೊಳ್ಳಿ
WhatsApp Facebook X Telegram
Bhadravathi Court Sentences Man to 2 Years Jail Bhadravati news Basaveshwara Statue 25
Bhadravathi Court Sentences Man to 2 Years Jail Bhadravati news Basaveshwara Statue 25

ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಿರತರಾಗಿದ್ದ ಮಹಿಳಾ ಬೂತ್ ಮಟ್ಟದ ಅಧಿಕಾರಿ (BLO) ಒಬ್ಬರು ಕರ್ತವ್ಯದ ವೇಳೆ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕೋಡಿ ಹೊಸೂರು ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ.=. ಕಲ್ಲಾಪುರದ ಅಂಗನವಾಡಿ ಶಿಕ್ಷಕಿ ಮಂಜುಳಾ (50) ಮೃತಪಟ್ಟವರು. SIR ಪ್ರಕ್ರಿಯೆಯ ಅಂಗವಾಗಿ ಕೋಡಿ ಹೊಸೂರು ಗ್ರಾಮದಲ್ಲಿ ಪಿಡಿಒ, BLO ಮಂಜುಳಾ ಹಾಗೂ ಸಹಾಯಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದರು.

ಈ ವೇಳೆ ಮಂಜುಳಾ ಏಕಾಏಕಿ ಕುಸಿದು ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ತಕ್ಷಣವೇ ಅವರನ್ನು ಸಹೋದ್ಯೋಗಿಗಳು ಅರಬಿಳಚಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಭದ್ರಾವತಿ ತಾಲೂಕು ಆಸ್ಪತ್ರೆಗೆ ಸಹ ರವಾನಿಸಲಾಗಿತ್ತು. ಆದರೆ ಅಷ್ಟರಲ್ಲಿ ಮಂಜುಳಾ ಕೊನೆಯುಸಿರೆಳೆದಿದ್ದಾರೆ

ಮೃತದೇಹವನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ತಾಲೂಕು ಮಟ್ಟದ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಜುಳಾ ಅವರ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನಷ್ಟೆ ಗೊತ್ತಾಗಬೇಕಿದೆ.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor