ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸಿಎಂ ಡಿಕೆ ಶಿವಕುಮಾರ್​ ನಮ್ಮಭಿಮಾನದ ಅಭಿನಂದನೆ! ಏನಿದು ವಿಶೇಷ ಓದಿ

ಹಂಚಿಕೊಳ್ಳಿ
WhatsApp Facebook X Telegram
Government Employees Association to Felicitate Chief Minister D.K. Shivakumar on July 11
Government Employees Association to Felicitate Chief Minister D.K. Shivakumar on July 11

Government Employees Association / ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ರಾಜ್ಯ ಸರ್ಕಾರಿ ನೌಕರರ ಸಂಘವೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸನ್ಮಾನಿಸುವ ಸಲುವಾಗಿ ಜುಲೈ 11 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿದೆ. ನಮ್ಮಭಿಮಾನದ ಅಭಿನಂದನೆ ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಈ ಸಂಬಂಧ ಕಾರ್ಯಕ್ರಮಕ್ಕೆ ಬರುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ. ನಿನ್ನೆದಿನ ಸೋಮವಾರ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ನೇತೃತ್ವದಲ್ಲಿ ವಿವಿಧ ನೌಕರರ ಸಂಘಗಳ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳ ನಿಯೋಗ ಸಿಎಂರನ್ನ ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೋರಿದರು.

ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಜುಲೈ 11 ರಂದು ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಈ ನಮ್ಮಭಿಮಾನದ ಅಭಿನಂದನೆ ಕಾರ್ಯಕ್ರಮ ಜರುಗಲಿದೆ. ಈ ಪ್ರತಿಷ್ಠಿತ ಸಮಾರಂಭದಲ್ಲಿ ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಶ್ರೀಗಳು ದಿವ್ಯ ಸಾನಿಧ್ಯ ವಹಿಸಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor