ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಗುಡ್ಡಗಾಡಿನಲ್ಲಿ ಅಡಗಿದ್ದ ಆರೋಪಿಯ ಬಂಧನ

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

Shimoga POCSO Case ಶಿವಮೊಗ್ಗ : ಗ್ರಾಮೀಣ ಪ್ರದೇಶವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಶಿವಮೊಗ್ಗದ  ಪೊಲೀಸ್ ಠಾಣೆಯೊಂದರ  ವ್ಯಾಪ್ತಿಯಲ್ಲಿ ಬರುವ ಕುಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 

ಶಿವಮೊಗ್ಗ; ಪ್ರತಿ ಲೀಟರ್ ಹಾಲಿಗೆ 20 ಬೆಂಬಲ ಬೆಲೆಗೆ ಆಗ್ರಹಿಸಿ ಮುಂದಿನ ವಾರ ಪ್ರತಿಭಟನೆ!

ಕಳೆದ ಜುಲೈ 2 ರಂದು ಅಪ್ರಾಪ್ತ ಬಾಲಕಿಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ನಡೆಸಿರುವ ಕುರಿತಂತೆ ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿತ್ತು. ಈ ಗಂಭೀರ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಪೋಕ್ಸೊ ಕಾಯ್ದೆಯಡಿ ತನಿಖೆ ಆರಂಭಿಸಿದ್ದರು. ಪ್ರಕರಣ ದಾಖಲಾಗುತ್ತಲೇ ಆರೋಪಿಯು ತಪ್ಪಿಸಿಕೊಂಡು ಗುಡ್ಡಗಾಡು ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ.

 ಆತನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದರು. ಸಾಗರ ಉಪವಿಭಾಗದ ಎಎಸ್ಪಿ ಬೆನಕ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ  ಆರೋಪಿಯ ಪತ್ತೆಗಾಗಿ ವಿಶೇಷ ತಂಡವೊಂದನ್ನು ರಚಿಸಲಾಗಿತ್ತು. ಈ ವಿಶೇಷ ತಂಡವು ಕಾರ್ಯಾಚರಣೆ ನಡೆಸಿ, ಗುಡ್ಡಗಾಡು ಪ್ರದೇಶದಲ್ಲಿ ಅಡಗಿಕುಳಿತಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor