Tunga Dam ಶಿವಮೊಗ್ಗ: ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ಗಾಜನೂರಿನ ತುಂಗಾ ಜಲಾಶಯವು ತನ್ನ ಗರಿಷ್ಠ ಮಟ್ಟವನ್ನು ತಲುಪಿದ್ದು, ಸಂಪೂರ್ಣವಾಗಿ ಭರ್ತಿಯಾಗಿದೆ. ಜಲಾಶಯದ ಗರಿಷ್ಠ ಮಟ್ಟ 588.24 ಮೀಟರ್ ಆಗಿದ್ದು, ಇಂದಿನ ನೀರಿನ ಮಟ್ಟವೂ ಸಹ 588.24 ಮೀಟರ್‌ಗೆ ತಲುಪಿದೆ ಎಂದು ಜಲಾಶಯದ ಮೂಲಗಳು ತಿಳಿಸಿವೆ.
ಶಿವಮೊಗ್ಗ; ಪ್ರತಿ ಲೀಟರ್ ಹಾಲಿಗೆ 20 ಬೆಂಬಲ ಬೆಲೆಗೆ ಆಗ್ರಹಿಸಿ ಮುಂದಿನ ವಾರ ಪ್ರತಿಭಟನೆ!

ಪ್ರಸ್ತುತ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದುಬರುತ್ತಿದ್ದು, ಒಟ್ಟು ಒಳಹರಿವು 40,144 ಕ್ಯೂಸೆಕ್ ದಾಟಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿರುವುದರಿಂದ ಹರಿದುಬಂದಷ್ಟೇ ಪ್ರಮಾಣದ ಅಂದರೆ 40,144 ಕ್ಯೂಸೆಕ್ ನೀರನ್ನು ವಿವಿಧ ಕಾಲುವೆ ಹಾಗೂ ನದಿಯ ಮೂಲಕ ಹೊರಬಿಡಲಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಲಾಶಯದಲ್ಲಿ ನೀರಿನ ಸಂಗ್ರಹ ಉತ್ತಮವಾಗಿದೆ.
