SHIVAMOGGA NEWS TODAY

ಸಕ್ರೆಬೈಲು ಆನೆ ಬಿಡಾರಕ್ಕೆ ಪಶುವೈದ್ಯರ ನೇಮಕ – ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Sakrebailu Elephant Camp ಶಿವಮೊಗ್ಗ: ಶಿವಮೊಗ್ಗ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಸಕ್ರೆಬೈಲು ಆನೆ ಬಿಡಾರದ ಆನೆಗಳಿಗೆ ಚಿಕಿತ್ಸೆ ನೀಡಲು ಹಾಗೂ ವನ್ಯಜೀವಿಗಳ ರಕ್ಷಣಾ ಕಾರ್ಯಕ್ಕಾಗಿ ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರೊಬ್ಬರ ಸೇವೆಯ ಅಗತ್ಯವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಿಸಿರುವಂತೆ, ಈ ಹುದ್ದೆಯು ತುರ್ತು ಸಂದರ್ಭಗಳಲ್ಲಿ ವನ್ಯಪ್ರಾಣಿಗಳಿಗೆ ಚಿಕಿತ್ಸೆ ನೀಡುವುದು, ಮರಣೋತ್ತರ ಪರೀಕ್ಷೆ ನಡೆಸುವುದು ಹಾಗೂ ಮಾನವ-ವನ್ಯಪ್ರಾಣಿ ಸಂಘರ್ಷದ ಸಂದರ್ಭದಲ್ಲಿ ತ್ವರಿತವಾಗಿ ಸ್ಪಂದಿಸುವ ಜವಾಬ್ದಾರಿಯನ್ನು ಹೊಂದಿರುತ್ತದೆ.

ವಿದ್ಯಾರ್ಹತೆ: ಬ್ಯಾಚಲರ್ ಆಫ್ ವೆಟರ್ನರಿ ಸೈನ್ಸ್ & ಅನಿಮಲ್ ಹಸ್ಬ್ಯಂಡರಿ (B.V.Sc & A.H) ಪದವಿ ಪಡೆದಿರಬೇಕು. ವನ್ಯಜೀವಿ ವಿಷಯದಲ್ಲಿ ಸ್ನಾತಕೋತ್ತರ ಪಶುವೈದ್ಯಕೀಯ ಪದವಿ (ಪೋಸ್ಟ್ ಗ್ರಾಜ್ಯುಯೇಷನ್) ಪಡೆದವರಿಗೆ ಹಾಗೂ ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ವನ್ಯಜೀವಿ ಕ್ಷೇತ್ರ ಅಥವಾ ಮೃಗಾಲಯಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. 

ಆಸಕ್ತರು ತಮ್ಮ ಸ್ವಯಂ ವಿವರಗಳ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ಜುಲೈ 27 ರಂದು ಬೆಳಿಗ್ಗೆ 10 ಗಂಟೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ,‌ವನ್ಯಜೀವಿ ವಿಭಾಗ ಶಿವಮೊಗ್ಗ ಇಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು.ಅರ್ಜಿ ನಮೂನೆಯನ್ನು ಶಿವಮೊಗ್ಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಿಂದ ಅಥವಾ https://sakrebailuelephantcamp.org/ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. 

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ: 08182-222983,ವಿಜಯ್‌ಕುಮಾರ್ ಕಾಳಪ್ಪನವರ್ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ 9481461553.ವಿನಯ್ ಜೆ ಆರ್, ವಲಯ ಅರಣ್ಯಾಧಿಕಾರಿ: 9663121406 ಇವರನ್ನು ಸಂಪರ್ಕಿಸಬಹುದೆಂದು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.