SHIVAMOGGA NEWS TODAY

ಶಿವಮೊಗ್ಗ: ಉದ್ಯೋಗ ಹುಡುಕ್ತಿದ್ದೀರ, ಹಾಗಾದ್ರೆ ಈ ಸುದ್ದಿ ಓದಿ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shivamogga Job Fair ಶಿವಮೊಗ್ಗ : ನಿರುದ್ಯೋಗಿ ಯುವಜನತೆಗೆ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಸುವರ್ಣಾವಕಾಶವೊಂದನ್ನು ಕಲ್ಪಿಸಿದೆ. ಇದೇ ಜುಲೈ 13 ರಂದು ಬೆಳಗ್ಗೆ 10:00 ಗಂಟೆಗೆ ಕಚೇರಿ ಆವರಣದಲ್ಲಿ ನೇರ ಸಂದರ್ಶನವನ್ನುಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ: ಸ್ವಂತ ಮಗ, ಸ್ನೇಹಿತರಿಂದಲೇ ಮನೆಯಲ್ಲಿ ಕಳ್ಳತನ? ಪೊಲೀಸರಿಗೆ ದೂರು ನೀಡಿದ ತಂದೆ!

ಉದ್ಯೋಗ ಮೇಳದಲ್ಲಿ ಸ್ವತಂತ್ರ ಮೈಕ್ರೋಫಿನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಪಾಲ್ಗೊಳ್ಳುತ್ತಿದ್ದು, ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹರನ್ನು ನೇಮಕ ಮಾಡಿಕೊಳ್ಳಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ ಅಥವಾ ಯಾವುದೇ ಪದವಿ ಮುಗಿಸಿರುವ 18 ರಿಂದ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನ ಎದುರಿಸಲು ಅರ್ಹರಾಗಿದ್ದಾರೆ. ಆಸಕ್ತರು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರವಾಗಿ ಬರಬೇಕಾಗಿದ್ದು, ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ. 

 ಈ ನೇರ ಸಂದರ್ಶನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ.ಹೆಚ್ಚಿನ ವಿವರಗಳಿಗಾಗಿ ಉದ್ಯೋಗಾಕಾಂಕ್ಷಿಗಳು ಕಚೇರಿಯನ್ನು ಖುದ್ದಾಗಿ ಭೇಟಿ ಮಾಡಬಹುದು ಅಥವಾ ದೂರವಾಣಿ ಸಂಖ್ಯೆಗಳಾದ 9108235132, 9380663606 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shivamogga Job Fair Walk-in Interview

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.