Thirthahalli Maternal Death ಶಿವಮೊಗ್ಗ: ತೀರ್ಥಹಳ್ಳಿಯ ಬಾಣಂತಿ ಸಾವು ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿರುವ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು, ಈ ಕುರಿತು ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ.
ಶಿವಮೊಗ್ಗ: ಜೈಲ್ ಸರ್ಕಲ್ ಬಳಿ ಫುಟ್ಪಾತ್ ಒತ್ತುವರಿ: ಜಾಹೀರಾತು ಫಲಕಗಳೇ ಸಾರ್ವಜನಿಕರಿಗೆ ತಲೆನೋವು
ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ತೀವ್ರ ರಕ್ತಸ್ರಾವದಿಂದ ಬಾಣಂತಿ ಸಾವನ್ನಪ್ಪಿರುವುದು ಅತ್ಯಂತ ದುಃಖಕರ ಸಂಗತಿ. ಶಿವಮೊಗ್ಗದಲ್ಲಿ ಎಲ್ಲಾ ಸೌಲಭ್ಯಗಳಿರುವ ಸುಸಜ್ಜಿತ ಮೆಡಿಕಲ್ ಕಾಲೇಜು ಇದ್ದರೂ, ರೋಗಿಯನ್ನು ಮಣಿಪಾಲ್ ಆಸ್ಪತ್ರೆಗೆ ಏಕೆ ಕಳುಹಿಸಲಾಯಿತು ಎಂಬುದರ ಕುರಿತು ತನಿಖೆ ನಡೆಸಲಾಗುವುದು. ವರದಿ ಬಂದ ಬಳಿಕವೇ ನಿಖರ ಕಾರಣ ತಿಳಿಯಲಿದೆ ಎಂದರು.
ತೀರ್ಥಹಳ್ಳಿಯಿಂದ ಶಿವಮೊಗ್ಗ ಮೆಡಿಕಲ್ ಕಾಲೇಜಿಗೆ ಕರೆದುಕೊಂಡು ಬಂದಾಗ ಏಕೆ ಸೂಕ್ತ ಚಿಕಿತ್ಸೆ ಸಿಗಲಿಲ್ಲ ಎಂಬ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ. ಕೇವಲ ಸ್ಥಳೀಯ ತನಿಖೆಯಷ್ಟೇ ಅಲ್ಲದೆ, ಉನ್ನತ ಮಟ್ಟದ ಅಧಿಕಾರಿಗಳಿಂದಲೂ ಈ ಬಗ್ಗೆ ತನಿಖೆ ಮಾಡಿಸುತ್ತೇನೆ. ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರ ಬಳಿಯೂ ಚರ್ಚಿಸುತ್ತೇನೆ. ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಯಲ್ಲಿ ಲೋಪದೋಷಗಳಿವೆಯೇ ಅಥವಾ ಇಲ್ಲವೇ ಎಂಬುದು ತನಿಖೆಯ ನಂತರವೇ ಹೊರಬರಲಿದೆ. ಹೆರಿಗೆ ಎಂಬುದು ಯಾವುದೇ ರೋಗವಲ್ಲ. ತೀರ್ಥಹಳ್ಳಿ ಮತ್ತು ಶಿವಮೊಗ್ಗದಲ್ಲಿ ದೊಡ್ಡ ಮಟ್ಟದ ಆಸ್ಪತ್ರೆಗಳು ಹಾಗೂ ವೈದ್ಯರಿದ್ದು, ಸೂಕ್ತ ಸೌಲಭ್ಯಗಳಿದ್ದರೂ ಸಾವು ಸಂಭವಿಸಿದ್ದು ಏಕೆ ಎಂಬ ಪ್ರಶ್ನೆ ಮೂಡಿದೆ.
ಇದೇ ವೇಳೆ ಆಸ್ಪತ್ರೆಗಳ ಸ್ಥಿತಿಗತಿ ಕುರಿತು ಮಾತನಾಡಿದ ಸಚಿವರು, ಸರ್ಕಾರಿ ಆಸ್ಪತ್ರೆಗಳನ್ನು ದೂಷಣೆ ಮಾಡುವುದು ಇತ್ತೀಚೆಗೆ ಒಂದು ಫ್ಯಾಷನ್ ಆಗಿದೆ. ತೀರ್ಥಹಳ್ಳಿ ಜೆ.ಸಿ. ಆಸ್ಪತ್ರೆಯಲ್ಲಿ ಎಲ್ಲಾ ಸೌಲಭ್ಯಗಳಿದ್ದು, ತಿಂಗಳಿಗೆ ನೂರು ಹೆರಿಗೆಗಳು ಆಗುತ್ತವೆ. ಆದರೂ ಅಲ್ಲಿ ರೋಗಿಗಳಿಗೆ ಆಗುತ್ತಿರುವ ಸಮಸ್ಯೆ ಏನು ಎಂಬುದನ್ನು ವೈಯಕ್ತಿಕವಾಗಿ ತಿಳಿದುಕೊಳ್ಳುತ್ತೇನೆ. ಕೇವಲ ಅಧಿಕಾರಿಗಳು ಕೊಟ್ಟ ಮಾಹಿತಿಯನ್ನು ನಾನು ನಂಬುವುದಿಲ್ಲ, ಅದಕ್ಕಾಗಿಯೇ ಜಿಲ್ಲಾಧಿಕಾರಿಗಳ ತನಿಖೆಗೆ ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು. ತಾಯಿ ಮತ್ತು ಮಗುವಿನ ಆರೋಗ್ಯಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ ಎಂದರು.
