SHIVAMOGGA NEWS TODAY

ಶಿವಮೊಗ್ಗ : ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ತಪ್ಪಿದ ಅನಾಹುತ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Tree Collapse ಶಿವಮೊಗ : ನಗರದ  ಗೋಪಿ ವೃತ್ತದ ಸಮೀಪದ ಸವಾರ್‌ಲೈನ್ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಇದ್ದಕ್ಕಿದ್ದಂತೆ ಬುಡಮೇಲಾಗಿ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಮರ ಬೀಳುವ ಸಮಯದಲ್ಲಿ ಅದೇ ಮಾರ್ಗದಲ್ಲಿ ಚಲಿಸುತ್ತಿದ್ದ ಕಾರೊಂದಲ್ಲಿ  ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾಗಿದೆ.

ಶಿವಮೊಗ್ಗ: ತಾಯಿ ಹಾಗೂ ಮಕ್ಕಳ ವಿರುದ್ಧ ಪೊಲೀಸರಿಗೆ ತಂದೆಯ ದೂರು, ಕಾರಣವೇನು?

ಸವಾರ್ ಲೈನ್ ರಸ್ತೆಯ ಮಧ್ಯಕ್ಕೆ ಮರ ಬಿದ್ದ ಕಾರಣ ಆ ಮಾರ್ಗದಲ್ಲಿ ಸಂಪೂರ್ಣವಾಗಿ ವಾಹನಗಳ ಸಂಚಾರ ಸ್ಥಗಿತಗೊಂಡು ಸಾರ್ವಜನಿಕರು ತೊಂದರೆ ಅನುಭವಿಸಿದರು. ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಮಹಾನಗರ ಪಾಲಿಕೆಯ ನೌಕರರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ಜೆಸಿಬಿ ಹಾಗೂ ಕಟಿಂಗ್ ಯಂತ್ರಗಳ ಸಹಾಯದಿಂದ ರಸ್ತೆಗೆ ಬಿದ್ದಿರುವ ಮರದ ರೆಂಬೆ-ಕೊಂಬೆಗಳನ್ನು ಕತ್ತರಿಸಿ ಸಂಚಾರ ಸುಗಮಗೊಳಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.