SHIVAMOGGA NEWS TODAY

ಪಾಟ್ ಒಡೆದವನನ್ನು ದೇವಸ್ಥಾನದಲ್ಲಿ ಕೂಡಿ ಹಾಕಿ ಪೊಲೀಸರಿಗೆ ದೂರು ನೀಡಿದ ಗ್ರಾಮಸ್ಥರು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಭದ್ರಾವತಿ: ಹಣಕಾಸಿನ ವಿಚಾರವಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರು ಹಿಡಿದು ದೇವಸ್ಥಾನದಲ್ಲಿ ಕೂಡಿ ಹಾಕಿದ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶಿವಮೊಗ್ಗ: ಸಿಟಿ ಬಸ್‌ಗಳಲ್ಲಿ ಕಿರಿಕಿರಿ ಉಂಟಾಗುತ್ತಿದೆಯೇ? ಈ ನಂಬರ್‌ಗೆ ಕಾಲ್ ಮಾಡಿ

Bhadravati ಘಟನೆಯ ವಿವರ

ಭದ್ರಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರುದಾರರಿಗೂ ಹಾಗೂ ಎದುರುದಾರರಿಗೂ ಹಣಕಾಸಿನ ವಿಚಾರವಾಗಿ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಎದುರುದಾರನು ದೂರುದಾರರ ಮನೆಯ ಕಿಟಕಿ ಗಾಜು ಹಾಗೂ ಹೂವಿನ ಪಾಟ್‌ಗಳನ್ನು ಒಡೆದು ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ದೂರುದಾರರು ಗ್ರಾಮಸ್ಥರ ಸಹಾಯದಿಂದ ಆತನನ್ನು ಹಿಡಿದು ಗ್ರಾಮದ ದೇವಸ್ಥಾನವೊಂದರಲ್ಲಿ ಕೂಡಿ ಹಾಕಿದ್ದಾರೆ.

ನಂತರ 112 ಸಿಬ್ಬಂದಿಗೆ ಫೋನ್ ಮಾಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮುಂದಿನ ಕ್ರಮಕ್ಕಾಗಿ ಆತನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.