INFORMATION NEWS

ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆ ಭರ್ತಿ! ಅರ್ಜಿ ಆಹ್ವಾನ, ಪೂರ್ತಿ ವಿವರ ತಿಳಿಯಿರಿ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

health department shivamogga / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬಂಧ ವಾರ್ತಾಇಲಾಖೆಯ ಮೂಲಕ ಪ್ರಕಟಣೆಯನ್ನು ನೀಡಲಾಗಿದೆ. ಆ ಬಗೆಗಿನ ಪೂರ್ತಿ ವಿವರ ಹೀಗಿದೆ.

ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರ ಆದೇಶದನ್ವಯ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹಾಗೂ ಫಾರ್ಮಸಿ ಅಧಿಕಾರಿಗಳ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಮಾತ್ರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಪ್ರಮುಖ ಅಂಶಗಳು

ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಗಳ ಒಟ್ಟು 18 ಹುದ್ದೆಗಳಿದ್ದು, ಅಭ್ಯರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಡಿಪ್ಲೋಮಾ ಇನ್ ಲ್ಯಾಬೋರೇಟರಿ ತಾಂತ್ರಿಕ ವಿದ್ಯಾರ್ಹತೆ ಪಡೆದಿರಬೇಕು.

ಫಾರ್ಮಸಿ ಅಧಿಕಾರಿಗಳು : ಒಟ್ಟು 24 ಹುದ್ದೆಗಳಿದ್ದು, ಅಭ್ಯರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಡಿ.ಫಾರ್ಮಾ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕಡ್ಡಾಯವಾಗಿ ಕರ್ನಾಟಕ ಫಾರ್ಮಸಿ ಕೌನ್ಸಿಲಿಂಗ್‌ನಲ್ಲಿ ನೋಂದಣಿಯಾಗಿರಬೇಕು.

ಅರ್ಹ ಅಭ್ಯರ್ಥಿಗಳು ದಿನಾಂಕ 16-07-2026 ರ ಬೆಳಿಗ್ಗೆ 10:30 ರಿಂದ ದಿನಾಂಕ 25-07-2026 ರ ಸಂಜೆ 5:30 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಈ ಎರಡು ಹುದ್ದೆಗಳಿಗೆ ಸಂಬಂಧಪಟ್ಟ ಅರ್ಜಿ ನಮೂನೆಯನ್ನು ಕಚೇರಿ ಅವಧಿಯಲ್ಲಿ ‘ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್. ರಸ್ತೆ, ಶಿವಮೊಗ್ಗ’ ಇಲ್ಲಿ ಪಡೆದುಕೊಳ್ಳಲು ಸೂಚಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-222382 ಅಥವಾ ಇಮೇಲ್ ಐಡಿ: [email protected] ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ