ಶಿವಮೊಗ್ಗ: ಎಸ್ಐಆರ್ (SIR) ಪ್ರಕ್ರಿಯೆಯ ಮುಖಾಂತರ ಬಿಜೆಪಿ ತಮಗೆ ಬಾರದೇ ಇರುವ ಮತಗಳನ್ನು ಪಟ್ಟಿಯಿಂದ ಕೈಬಿಡಲು ವ್ಯವಸ್ಥಿತವಾಗಿ ಪ್ರಯತ್ನಿಸುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಗಂಭೀರವಾಗಿ ಆರೋಪಿಸಿದ್ದಾರೆ.
ಶಿವಮೊಗ್ಗ: ತುಂಗಾ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ ಇವತ್ತು?
ನಗರದ ಪತ್ರಿಕಾ ಭವನದಲ್ಲಿ ಇಂದು ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಸ್ಐಆರ್ ಪ್ರಕ್ರಿಯೆ ಅತ್ಯಂತ ಬಿರುಸಿನಿಂದ ಸಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 15 ಲಕ್ಷ ಮತದಾರರಿದ್ದು, ಈ ಪೈಕಿ ಶೇಕಡಾ 90 ರಷ್ಟು ಫಾರಂಗಳನ್ನು ಬಿಎಲ್ಒಗಳು ಈಗಾಗಲೇ ವಿತರಿಸಿದ್ದಾರೆ. ಅದರಲ್ಲಿ ಸರಿಸುಮಾರು 7 ಲಕ್ಷ ಫಾರಂಗಳನ್ನು ಯಶಸ್ವಿಯಾಗಿ ಭರ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ರಾಜ್ಯಾದ್ಯಂತ ಎಸ್ಐಆರ್ ಪ್ರಕ್ರಿಯೆ ಜಾರಿಯಲ್ಲಿದ್ದು, ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಕೈಬಿಟ್ಟು ಹೋಗಬಾರದು ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದೆ. ಬಿಎಲ್ಒಗಳು ಅತ್ಯಂತ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ ಮತ್ತು ಫಾರಂಗಳನ್ನು ಭರ್ತಿ ಮಾಡಲು ಸೂಕ್ತ ಸಹಕಾರ ನೀಡುತ್ತಿದ್ದಾರೆ. ಆದರೆ, ಬಿಜೆಪಿ ತಮಗೆ ಬಾರದ ಮತಗಳನ್ನು ತೆಗೆದುಹಾಕಲು ಸಂಚು ರೂಪಿಸುತ್ತಿದೆ. ನಾವು ಪ್ರಕ್ರಿಯೆಯ ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದರೂ, ಅದನ್ನು ಜಾರಿಗೆ ತಂದಿಲ್ಲ. ಆದಾಗ್ಯೂ, ಸಾರ್ವಜನಿಕರ ಹಿತದೃಷ್ಟಿಯಿಂದ ಶಾಶ್ವತ ನಿವಾಸಿ ಪ್ರಮಾಣಪತ್ರ ಇದ್ದರೂ ಸಾಕು ಎಂಬ ನಿಯಮವನ್ನು ಜಾರಿಗೆ ತಂದಿದ್ದೇವೆ. ಈ ಪ್ರಮಾಣಪತ್ರವನ್ನು ತಹಸೀಲ್ದಾರ್ ಅಥವಾ ಮಹಾನಗರ ಪಾಲಿಕೆ ಆಯುಕ್ತರು ನೀಡಬಹುದಾಗಿದೆ.
ನಮ್ಮ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಸಾರ್ವಜನಿಕರಿಂದ ಫಾರಂಗಳನ್ನು ಭರ್ತಿ ಮಾಡಿಸಿ ವಾಪಸ್ ತಂದು ಕೊಡುತ್ತಿದ್ದಾರೆ. ಅರ್ಹ ಮತದಾರರು ಪಟ್ಟಿಯಿಂದ ವಂಚಿತರಾಗದಂತೆ ನಾವು ನಿಗಾ ವಹಿಸುತ್ತಿದ್ದೇವೆ. ಆದರೆ, ಬಿಜೆಪಿ ಪಿಚ್ಆರ್ (PCR) ಪ್ರಮಾಣಪತ್ರದ ಬಗ್ಗೆ ಇಲ್ಲಸಲ್ಲದ ಟೀಕೆಗಳನ್ನು ಮಾಡುತ್ತಾ ಜನರ ದಾರಿ ತಪ್ಪಿಸುತ್ತಿದೆ. ಇದು ಸರಿಯಾದ ಕ್ರಮವಲ್ಲ. ಎಸ್ಐಆರ್ಗೆ ಬೇಕಾದ ಎಲ್ಲ ಅಧಿಕೃತ ದಾಖಲೆಗಳನ್ನು ನಾವು ಒದಗಿಸಲಿದ್ದೇವೆ. ಬಿಎಲ್ಒಗಳು ಮಾಡುತ್ತಿರುವ ಉತ್ತಮ ಕಾರ್ಯ ಶ್ಲಾಘನೀಯವಾಗಿದ್ದು, ಫಾರಂ ಪಡೆದುಕೊಂಡಿರುವ ಎಲ್ಲಾ ನಾಗರಿಕರು ಕಡ್ಡಾಯವಾಗಿ ಎನ್ಯುಮರೇಶನ್ ಫಾರಂಗಳನ್ನು ಭರ್ತಿ ಮಾಡಿ ಹಿಂದಿರುಗಿಸಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕಲೀಂ ಪಾಶಾ, ಜಿ.ಪಲ್ಲವಿ, ಚೇತನ್ ಗೌಡ, ಡಾ.ಶ್ರೀನಿವಾಸ್ ಕರಿಯಣ್ಣ, ಶಿವಣ್ಣ ಹಾಗೂ ಜಯಣ್ಣ ಉಪಸ್ಥಿತರಿದ್ದರು.
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.
