SHIMOGA NEWS LIVE

ಎಸ್​ಪಿ ನಿಖಿಲ್ ಸಮ್ಮುಖದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪಿಸ್ತೂಲ್​, ರೈಫಲ್ಸ್​, ಬಂದೂಕು ಶೋ!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Doddapete Police Station / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಸಮುದಾಯದಲ್ಲಿ ನಂಬಿಕೆ ಮೂಡಿಸಲು ಮತ್ತು ಯುವ ಪೀಳಿಗೆಗೆ ಜಾಗೃತಿ ಮೂಡಿಸುವ ಪ್ರಯತ್ನದ ಭಾಗವಾಗಿ, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಈ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಕುರಿತಾದ ಭಯ ಮತ್ತು ಗೊಂದಲಗಳನ್ನು ನಿವಾರಿಸಲು, ಜಿಲ್ಲಾ ಶಸ್ತ್ರಾಗಾರದಿಂದ ತರಲಾಗಿದ್ದ ರೈಫಲ್ಸ್, ಪಿಸ್ತೂಲ್ ಸೇರಿದಂತೆ ವಿವಿಧ ಆಯುಧಗಳ ಪ್ರದರ್ಶನ ಮಾಡಲಾಯ್ತು. ಅಲ್ಲದೆ ಈ ಬಗ್ಗೆ ವಿದ್ಯಾರ್ಥಿಗಳಿಗೆ ಪೊಲೀಸರು ವಿವರಿಸಿ ಮಾಹಿತಿ ನೀಡಿದರು. ಜೊತೆಯಲ್ಲಿ ಸಾರ್ವಜನಿಕ ಸುರಕ್ಷತೆಯಲ್ಲಿ ಇವುಗಳ ಪಾತ್ರವೇನು ಎಂಬುದನ್ನು ಅಧಿಕಾರಿಗಳು ವಿವರಿಸಿದರು. ಇದಲ್ಲದೆ, ವಿದ್ಯಾರ್ಥಿಗಳು ದೊಡ್ಡಪೇಟೆ ಪೊಲೀಸ್ ಠಾಣೆಯ ಒಳಗೆ ಹೋಗಿ ಅಲ್ಲಿನ ಕೆಲಸದ ವಾತಾವರಣ, ಸಿಬ್ಬಂದಿಯ ಕಾರ್ಯವೈಖರಿ ಮತ್ತು ದೈನಂದಿನ ಚಟುವಟಿಕೆಗಳನ್ನು ಹತ್ತಿರದಿಂದ ವೀಕ್ಷಿಸಿದರು.

ಶಿವಮೊಗ್ಗದ ಆದಿಚುಂಚನಗಿರಿ ಶಾಲೆಯ ವಿದ್ಯಾರ್ಥಿಗಳು ದೊಡ್ಡಪೇಟೆ ಪೊಲೀಸ್ ಠಾಣೆಯೊಂದು ಹೇಗಿರುತ್ತೆ, ಪೊಲೀಸರು ಹೇಗೆ ಕೆಲಸ ಮಾಡುತ್ತಾರೆ, ಅವರ ಶಿಸ್ತು ಹೇಗಿರುತ್ತೆ ಎಂಬಿತ್ಯಾದಿ ವಿಚಾರಗಳನ್ನು ಕೇಳಿ ತಿಳಿದುಕೊಂಡರು. ಅಲ್ಲದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್, ಐಪಿಎಸ್ ಅವರ ಜೊತೆ ಮಕ್ಕಳು ಸಂವಾದ ನಡೆಸಿದರು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಎಸ್ಪಿ ಮಾದಕ ವಸ್ತುಗಳಿಂದ ದೂರವಿರಿ ಎಂದು ಸಲಹೆ ನೀಡಿದರಷ್ಟೆ ಅಲ್ಲದೆ ‘ಬೇಡ ಬ್ರೋ’ (Beda Bro) ಅಭಿಯಾನವನ್ನು ವಿದ್ಯಾರ್ಥಿಗಳು ಮುಂದುವರಿಸುವಂತೆ ಮನವಿ ಮಾಡಿದರು. ಈ ವೇಳೆ ವಿದ್ಯಾರ್ಥಿಗಳು ಕೇಳಿದ ಭವಿಷ್ಯದ ಪ್ರಶ್ನೆಗಳಿಗೂ ಎಸ್​ಪಿ ನಿಖಿಲ್ ಬಿ ಉತ್ತರಿಸಿದರು.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ