SHIVAMOGGA NEWS TODAY

ಶಿವಮೊಗ್ಗ ಪೇಪರ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ

ajjimane ganesh ನವೀಕರಣ: 15 ಜುಲೈ 2026, 8:56 ಅಪರಾಹ್ನ ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಬಳಿ ಇರುವ ಪೇಪರ್ ಫ್ಯಾಕ್ಟರಿಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಏಕಾಏಕಿ ಹೊತ್ತಿಕೊಂಡ ಬೆಂಕಿಯ ಕೆನ್ನಾಲಿಗೆಗೆ ಫ್ಯಾಕ್ಟರಿಯಲ್ಲಿದ್ದ ಪೇಪರ್ ರೋಲ್‌ಗಳು  ಉರಿದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ.

​ಕಾರ್ಖಾನೆಯಾದ್ಯಂತ ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ಬೆಂಕಿಯ ತೀವ್ರತೆ ಅರಿತ ತಕ್ಷಣವೇ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗೆ ಓಡಿಬಂದಿದ್ದರಿಂದ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ