RIPPONPET

ರಿಪ್ಪನ್‌ಪೇಟೆ : ಕಾರು ಪಲ್ಟಿ, ಒಬ್ಬರ ಸ್ಥಿತಿ ಗಂಭೀರ, ಇಬ್ಬರಿಗೆ ಗಾಯ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ರಿಪ್ಪನ್‌ಪೇಟೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಶೆಟ್ಟಿಬೀಡು ಬಳಿ ನಡೆದಿದೆ.

Ripponpet Accident ಘಟನೆ ವಿವರ 

ಸ್ವಿಫ್ಟ್​  ಕಾರಿನಲ್ಲಿ ಕುಸುಗುಂಡಿ ಗ್ರಾಮದ ಗಿರಿಜಮ್ಮ (60), ದರ್ಶನ್ (22) ಹಾಗೂ ಹರ್ಷಿತಾ (22)  ಈ ಸಂದರ್ಭದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ನಾಲ್ಕು ಪಲ್ಟಿಯಾಗಿದೆ.  ಇದರ ಪರಿಣಾಮವಾಗಿ ಕಾರಿನಲ್ಲಿದ್ದ ಗಿರಿಜಮ್ಮರವರ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಹಾಗೆಯೇ ಕಾರು ಚಾಲಕ ದರ್ಶನ್ ಅವರಿಗೆ ಎದೆ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಹರ್ಷಿತಾ ಅವರಿಗೆ ಸೊಂಟ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಅಪಘಾತದ ಬಳಿಕ ಸ್ಥಳೀಯರು ತಕ್ಷಣವೇ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ರಿಪ್ಪನ್‌ಪೇಟೆ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.