INFORMATION NEWS

ಇದೀಗ ಗೃಹಜ್ಯೋತಿಗೆ ದಾಖಲೆ ಕೊಡುವ ಸಮಯ! ಮಹತ್ವದ ಮಾಹಿತಿ ಅಪ್​ಡೇಟ್ ಓದಿ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Official Clarifies on Gruhajyothi / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಎಸ್​ಐಆರ್​ ನಡುವೆ ಇದೀಗ ಗೃಹ ಜ್ಯೋತಿ ಯೋಜನೆಯ ಪರಿಷ್ಕರಣೆ ನಡೆಯುತ್ತಿದೆ. ಈಗಾಗಲೇ ಮೀಟರ್​ ರೀಡಿಂಗ್ ಸಿಬ್ಬಂದಿ ಮನೆ ಬಾಗಿಲಿಗೆ ನಂಬರ್ ಹಾಕಿದ್ದು, ಗೃಹಜ್ಯೋತಿಯ ದಾಖಲೆ ಪಡೆಯಲು ಸದ್ಯದಲ್ಲಿಯೇ ಸಿಬ್ಬಂದಿ ಮನೆಮನೆಗೆ ಭೇಟಿ ನೀಡಲಿದ್ದಾರೆ.

ಈ ಬಗ್ಗೆ ಮಾತನಾಡಿದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರ ಮಾಹಿತಿ ಪರಿಶೀಲನಾ ಕಾರ್ಯವು ಜುಲೈ 1 ರಿಂದ ಆರಂಭವಾಗಿದೆ. ಈ ಕುರಿತು ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದರು.

ಮನೆ ಬಾಗಿಲಿಗೆ ಮೆಸ್ಕಾಂ ಸಿಬ್ಬಂದಿ: ಮೆಸ್ಕಾಂ ಮೀಟರ್ ರೀಡರ್‌ಗಳು ಮತ್ತು ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಫಲಾನುಭವಿಗಳು ಈ ಸಮೀಕ್ಷೆಗಾಗಿ ಮೆಸ್ಕಾಂ ಕಚೇರಿಗೆ ಅಲೆಯುವ ಅಗತ್ಯವಿಲ್ಲ.

ಉಚಿತ ವಿದ್ಯುತ್ ಸ್ಥಗಿತವಾಗಲ್ಲ

ಈ ಸಮೀಕ್ಷೆಯು ಕೇವಲ ಫಲಾನುಭವಿಗಳ ವಿವರಗಳನ್ನು ಅಪ್‌ಡೇಟ್ ಮಾಡಿಕೊಳ್ಳುವ ಸಾಮಾನ್ಯ ಪ್ರಕ್ರಿಯೆಯಾಗಿದ್ದು, ಯಾವುದೇ ಕಾರಣಕ್ಕೂ ಉಚಿತ ವಿದ್ಯುತ್ ಸೇವೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದು ತಿಳಿಸಿದ ಚಂದ್ರಭೂಪಾಲ ಜಿಲ್ಲೆಯಲ್ಲಿ ಯೋಜನೆಗೆ ನೋಂದಣಿಯಾಗಿರುವ ಒಟ್ಟು 5,09,133 ಗೃಹಗಳಲ್ಲಿ ಈಗಾಗಲೇ 1,38,566 ಮನೆಗಳ ಸಮೀಕ್ಷೆ ಪೂರ್ಣಗೊಂಡಿದ್ದು, ಶೇ. 29 ರಷ್ಟು ಪ್ರಗತಿ ಸಾಧಿಸಲಾಗಿದೆ. ಸಾರ್ವಜನಿಕರು ಸಿಬ್ಬಂದಿಗೆ ಅಗತ್ಯ ದಾಖಲೆ ನೀಡಿ ಸಹಕರಿಸುವಂತೆ ಕೋರಿದರು.

ಈ ವೇಳೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷರುಗಳಾದ ಎಂ ಎಸ್ ಬಸವರಾಜಪ್ಪ, ಆರ್ ಶಿವಣ್ಣ, ಇಕ್ಕೇರಿ ರಮೇಶ್
ತಾಲ್ಲೂಕು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಚ್ ಎಂ ಮಧು, ಸದಸ್ಯರುಗಳಾದ ಅಮೀರ್ ಅಮ್ಜಾ, ಎಸ್ ಪ್ರಭಾಕರ್, ಭವ್ಯ ಕೃಷ್ಣಮೂರ್ತಿ, ಎಂ ರಾಹುಲ್, ಅರ್ಚನಾ, ಎನ್ ನವುಲೇಶ್,ಯು ಶಿವಾನಂದ, ಕೆ ಉದಯಕುಮಾರ್, ಎಚ್ ಬಿ ಚಿದಂಬರ, ಎಚ್ ಕೆ ಜಯಶೀಲಪ್ಪಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ‌ನಿರ್ದೇಶಕಿ ಭಾರತಿ ಬಣಕಾರ್, ಸಿಡಿಪಿಓ‌ ಗಂಗೂಬಾಯಿ, ಮೆಸ್ಕಾಂ ಇಲಾಖೆ ನಿಯಂತ್ರಣಾಧಿಕಾರಿ ಚಂದ್ರಕಲಾ, ಇತರೆ ಅಧಿಕಾರಿಗಳು ಹಾಜರಿದ್ದರು. ಉಪಸ್ಥಿತರಿದ್ದರು.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ