SHIVAMOGGA NEWS TODAY

ಶಿವಮೊಗ್ಗ |ಹೊಳೆಯಲ್ಲಿ ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ 15 ದಿನ ಬಳಿಕ ಪತ್ತೆ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Malathi River / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ತೀರ್ಥಹಳ್ಳಿ ತಾಲ್ಲೂಕಿನ ಮಾಲತಿ ನದಿಯಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ವೃದ್ಧರೊಬ್ಬ ರ ಮೃತದೇಹ 15 ದಿನದ ಬಳಿಕ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೇಳೂರು ಗ್ರಾಮದ ರಾಮಪ್ಪ (62) ಮೃತರು. 15 ದಿನಗಳ ಹಿಂದೆ ತಮ್ಮ ತೋಟಕ್ಕೆ ನೀರಿ ಮೋಟಾರ್ ಆಫ್ ಮಾಡಲು ಹೋದ ಸಂದರ್ಭದಲ್ಲಿ ನಾಪತ್ತೆಯಾಗಿದ್ದರು. ತೋಟದ ಸಮೀಪ ಹರಿಯುವ ಮಾಲತಿ ನದಿಯ ದಂಡೆಯ ಮೇಲೆ ರಾಮಪ್ಪ ಅವರು ಚಪ್ಪಲಿ ಹಾಗೂ ಬಟ್ಟೆ ಪತ್ತೆಯಾಗಿತ್ತು.

ತುಂಗಾ ನದಿಯ ಉಪನದಿಯಾಗಿರುವ ಮಾಲತಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಇದ್ದ ಕಾರಣ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯ ನಡೆಸಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ. ಇದೀಗ ವೃದ್ಧನ ಶಮ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ