Heavy Rain Forecast / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ರಾಜ್ಯದ 10 ಜಿಲ್ಲೆಗಳಲ್ಲಿ 3 ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ್ದರೆ, ಉಳಿದ ಜಿಲ್ಲೆಗಳಿಗೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ಮಳೆಗಾಲದಲ್ಲಿ ಬಿಸಿಲು ಹೆಚ್ಚಾಗುತ್ತಿದ್ದು, ಬೇಸಿಗೆಯ ಅನುಭವವಾಗುತ್ತಿದೆ. ಇದರ ನಡುವೆ ಜುಲೈ 18ರಿಂದ 20ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜು. 18ರಂದು ಆರೆಂಜ್ ಅಲರ್ಟ್ ಹಾಗೂ 19 ಹಾಗೂ 20ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
ಉಳಿದಂತೆ ಚಿಕ್ಕಮಗಳೂರು. ಶಿವಮೊಗ್ಗ, ಹಾಸನ, ಕೊಡಗು, ಧಾರವಾಡ, ಗದಗ, ಹಾವೇರಿ ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ. ಮಳೆ ಸುರಿದರೂ ನಂತರ ಮುಂಗಾರು ದುರ್ಬಲ ವಾಗಲಿದ್ದು ತಾಪಮಾನ ಏರಿಕೆಯಾಗಲಿದೆ. ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತಲೂ 3-5 ಡಿಗ್ರಿ ಸೆಲ್ಸಿಯಸ್ ಹೆಚ್ಚು ತಾಪಮಾನವಿರಲಿದೆ ಎಂದು ಮುನ್ಸೂಚನೆ ನೀಡಿದೆ.
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.
