ಗಾಜನೂರು ಡ್ಯಾಮ್​​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥ: ಆಮೇಲೆ ಏನಾಯ್ತು?

ಹಂಚಿಕೊಳ್ಳಿ
WhatsApp Facebook X Telegram
Karnataka Pension Scheme
Karnataka Pension Scheme

ಶಿವಮೊಗ್ಗ ; ಗಾಜನೂರು ಡ್ಯಾಮ್​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಮಾನಸಿಕ ಅಸ್ವಸ್ಥನನ್ನು ಮೀನುಗಾರರು ರಕ್ಷಣೆ ಮಾಡಿರುವ ಘಟನೆ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

Gajanur Dam ಘಟನೆ ವಿವರ

ತುಂಗಾ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  ಜುಲೈ 16 ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಿಂದ ದೂರುದಾರರು 112ಗೆ ಕರೆ ಮಾಡಿದ್ದರು. ಮಾನಸಿಕ ಅಸ್ವಸ್ಥ ಯುವಕನೊಬ್ಬ ಗಾಜನೂರು ಡ್ಯಾಮ್‌ನಲ್ಲಿ ಬಿದ್ದು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಅಲ್ಲಿಯೇ ಮೀನು ಹಿಡಿಯುತ್ತಿದ್ದವರು ಆತನನ್ನು ತಕ್ಷಣವೇ ರಕ್ಷಣೆ ಮಾಡಿರುವುದಾಗಿ ತಿಳಿಸಿದ್ದರು.

ಮಾಹಿತಿ ತಿಳಿಯುತ್ತಿದ್ದಂತೆ ತಕ್ಷಣವೇ ಸ್ಥಳಕ್ಕೆ ತೆರಳಿದ ERV ಸಿಬ್ಬಂದಿಗಳು, ಸದರಿ ಮಾನಸಿಕ ಅಸ್ವಸ್ಥ ಯುವಕನನ್ನು ಸುರಕ್ಷಿತವಾಗಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಬಳಿಕ ಆತನ ಪೋಷಕರಿಗೆ ಮಾಹಿತಿಯನ್ನು ನೀಡಿ ಠಾಣೆಗೆ ಕರೆಸಿಕೊಂಡ ಅಧಿಕಾರಿಗಳು, ಕುಟುಂಬಸ್ಥರಿಗೆ ಸೂಕ್ತ ತಿಳುವಳಿಕೆ ಮತ್ತು ಕೌನ್ಸೆಲಿಂಗ್ ನೀಡಿ ಯುವಕನನ್ನು ಅವರೊಂದಿಗೆ ಸುರಕ್ಷಿತವಾಗಿ ಕಳುಹಿಸಿಕೊಟ್ಟಿರುತ್ತಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor