ಭದ್ರಾವತಿ : ಗಾಂಜಾ  ದಾಳಿ: 19 ವರ್ಷದ ಇಬ್ಬರು ಯುವಕರು ಬಂಧನ

ಹಂಚಿಕೊಳ್ಳಿ
WhatsApp Facebook X Telegram
Karnataka Pension Scheme
Karnataka Pension Scheme

Bhadravathi Drug Bust ಭದ್ರಾವತಿ : ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಾರ್ಯಾಚರಣೆ ನಡೆಸಿ  ಭದ್ರಾವತಿ ಗ್ರಾಮಾಂತರ ಪೊಲೀಸ್ರು  ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 1 ಕೆಜಿ 310 ಗ್ರಾಂ ತೂಕದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು

ನಾಗತಿ ಬೆಳಗಲು ಗ್ರಾಮದ ತಾಂಡಾ ಕಡೆಯಿಂದ ಭದ್ರಾವತಿ ಕಡೆಗೆ ಇಬ್ಬರು ವ್ಯಕ್ತಿಗಳು ಗಾಂಜಾ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಭದ್ರಾವತಿ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ.  

ದಾಳಿಯ ವೇಳೆ ಪೊಲೀಸರು  19 ವರ್ಷ ವಯಸ್ಸಿನ ಇಬ್ಬರು ಯುವಕರನ್ನು ವಶಪಡಿಸಿಕೊಂಡಿದ್ದಾರೆ. ಹಾಗೆಯೇ ಆರೋಪಿಗಳ  ಬಳಿಯಿದ್ದ ಅಂದಾಜು 65,500 ರೂಪಾಯಿ ಮೌಲ್ಯದ 01 ಕೆಜಿ 310 ಗ್ರಾಂ ಗಾಂಜವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ವಿವಿದ ಕಾಯ್ದೆಗಳ ಅಡಿ ಪ್ರಕರಣ ದಾಖಲಾಗಿದೆ. 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor