POLITICS

ಶಿವಮೊಗ್ಗ: ಕಾಂಗ್ರೆಸ್‌ಗೆ ಹಿರಿಯ ಮುಖಂಡ ಎಸ್.ಪಿ. ದಿನೇಶ್ ವಾಪಸ್; ಉಚ್ಚಾಟನೆ ಆದೇಶ ರದ್ದು!

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Shimoga Congress ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್‌ಗೆ ಮುಖಂಡ ಎಸ್.ಪಿ. ದಿನೇಶ್ ವಾಪಸ್ ಆಗಿದ್ದಾರೆ. 2 ವರ್ಷಗಳ ಹಿಂದೆ ನಡೆದಿದ್ದ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ ಸಂದರ್ಭದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿದ್ದ ಎಸ್.ಪಿ. ದಿನೇಶ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಈ ಕಾರಣಕ್ಕೆ ಎಸ್.ಪಿ. ದಿನೇಶ್ ಸ್ವತಂತ್ರವಾಗಿ ಸ್ಪರ್ಧಿಸಿದ್ದರು.

ಶಿವಮೊಗ್ಗ: ಸಾಲದ ಬಾಧೆಗೆ ಮನನೊಂದು ಆಟೋ ಚಾಲಕ ಆತ್ಮ*ಹತ್ಯೆ

ಬಿಜೆಪಿ ತೊರೆದು ಜೆಡಿಎಸ್ ಸೇರಿ ಶಿವಮೊಗ್ಗ ನಗರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಯನೂರು ಮಂಜುನಾಥ್, ನೈರುತ್ಯ ಪದವೀಧರ ಕ್ಷೇತ್ರ MLC ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆನಂತರ ಎಲೆಕ್ಷನ್‌ನಲ್ಲಿ ಸೋತ ಅವರು, ತಮ್ಮ ರಾಜೀನಾಮೆಯಿಂದ ತೆರವಾಗಿದ್ದ ಪದವೀಧರ ಕ್ಷೇತ್ರದಲ್ಲಿ ಚುನಾವಣೆಗೆ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದು ಸ್ಪರ್ಧಿಸಿದ್ದರು. ಈ ವೇಳೆ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್.ಪಿ. ದಿನೇಶ್ ಅವರು ಸ್ವತಂತ್ರವಾಗಿ ಸ್ಪರ್ಧಿಸಿದ್ದರು.

ಈ ಹಿನ್ನೆಲೆಯಲ್ಲಿ ಅವರ ಮೇಲೆ ಶಿಸ್ತುಕ್ರಮ ಕೈಗೊಂಡಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು ಇದೀಗ ಉಚ್ಚಾಟನೆಯನ್ನು ವಾಪಸ್ ಪಡೆದಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಈ ಬಗ್ಗೆ ಸೂಚನೆ ನೀಡಿದ್ದು, ಎಸ್.ಪಿ. ದಿನೇಶ್‌ಗೆ ಉಚ್ಚಾಟನೆಯ ಆದೇಶವನ್ನು ರದ್ದುಗೊಳಿಸಿರುವ ಪತ್ರವನ್ನು ನೀಡಿದ್ದಾರೆ.

ಪತ್ರದಲ್ಲಿ, ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಗೊಳಿಸುವ ಕುರಿತಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾನ್ಯ ಅಧ್ಯಕ್ಷರ ಅನುಮೋದನೆಯ ಮೇರೆಗೆ, ಎಸ್.ಪಿ. ದಿನೇಶ್ ಅವರ ಮೇಲಿನ ಉಚ್ಚಾಟನೆ ಆದೇಶವನ್ನು ರದ್ದುಗೊಳಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಮರುಸೇರ್ಪಡೆಗೊಳಿಸಲು ನಿರ್ಧರಿಸಲಾಗಿದೆ” ಎಂದು ಉಲ್ಲೇಖಿಸಿದ್ದಾರೆ.

ಹಾಗೂ, ತಾವುಗಳು ಪಕ್ಷದ ಸಿದ್ಧಾಂತ, ಶಿಸ್ತು ಮತ್ತು ಸಂಪ್ರದಾಯಗಳನ್ನು ಪಾಲಿಸಿಕೊಂಡು, ಜಿಲ್ಲೆಯ ಹಿರಿಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸಿ, ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ಎಂದಿನಂತೆ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಎಸ್.ಪಿ. ದಿನೇಶ್ ಅವರು ಕೆಪಿಸಿಸಿ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಸಹ ಭೇಟಿಯಾಗಿದ್ದಾರೆ. ಇಂದು ಪಕ್ಷದ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ಅವರ ಮೂಲಕ ಪಕ್ಷಕ್ಕೆ ಮತ್ತೆ ಸೇರ್ಪಡೆಗೊಂಡರು.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.