ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಕೋರ್ಟ್​ ವಿಧಿಸಿದ  ಶಿಕ್ಷೆ ಏನು?

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಶಿವಮೊಗ್ಗ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ 3 ವರ್ಷಗಳ ಕಠಿಣ ಕಾರಾಗೃಹವಾಸ ಶಿಕ್ಷೆ ಹಾಗೂ 50,000 ರೂಪಾಯಿ ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

Shivamogga Court ಘಟನೆ ವಿವರ

2024ರಲ್ಲಿ ಶಿಕಾರಿಪುರ ತಾಲೂಕಿನ 23 ವರ್ಷದ ವ್ಯಕ್ತಿಯೊಬ್ಬರು, 15 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿಎಸ್‌ಐಪುಷ್ಪಾ ಅವರು ಪ್ರಕರಣದ ಸಮಗ್ರ ತನಿಖೆ ಪೂರ್ಣಗೊಳಿಸಿ, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಶಿವಮೊಗ್ಗದ  ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ದಲ್ಲಿ ಪ್ರಕರಣದ ವಿಚಾರಣೆ ನಡೆಯಿತು.ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ಮಾನ್ಯ ನ್ಯಾಯಾಧೀಶರಾದ ನಿಂಗನಗೌಡ ಭ. ಪಾಟೀಲ್ ಅವರು ಆರೋಪಿಗೆ  03 ವರ್ಷ ಕಠಿಣ ಕಾರಾಗೃಹವಾಸ ಶಿಕ್ಷೆ ಹಾಗೂ ₹50,000/- ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor