SHIVAMOGGA NEWS TODAY

ಶಿವಮೊಗ್ಗ: ಡಿವಿಎಸ್ ಕಾಲೇಜ್ ಮುಂಭಾಗ ಕಿರಿಕ್​​, ಅಕ್ಕಪಡೆಯ ಎಂಟ್ರಿ, ಆಮೇಲೆ ಏನಾಯ್ತು ?

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಸುರಕ್ಷತೆಯನ್ನು ಕಾಯುವ ನಿಟ್ಟಿನಲ್ಲಿ ಅಕ್ಕ ಪಡೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಇದೀಗ ಡಿ.ವಿ.ಎಸ್ ಕಾಲೇಜಿನ ಬಳಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಆರೋಪಿಯೊಬ್ಬನ ವಿರುದ್ಧ ಅಕ್ಕ ಪಡೆ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದಾರೆ. 

ಶಿವಮೊಗ್ಗ : 23 ವರ್ಷದ ಯುವತಿ ಕಾಣೆ : ಪತ್ತೆಗಾಗಿ ಪೊಲೀಸ್​​​ ಪ್ರಕಟಣೆ

Akka Pade ಘಟನೆ ವಿವರ

ಶಿವಮೊಗ್ಗ ನಗರದ ಪ್ರಸಿದ್ಧ ಡಿ.ವಿ.ಎಸ್ ಕಾಲೇಜಿನ ಮುಂಭಾಗದಲ್ಲಿ ವ್ಯಕ್ತಿಯೊಬ್ಬ ಸಾರ್ವಜನಿಕರಿಗೆ ಅನಗತ್ಯವಾಗಿ ಗಲಾಟೆ ಮಾಡುತ್ತಾ ಉಪಟಳ ನೀಡುತ್ತಿದ್ದ ಕುರಿತು ಶಿವಮೊಗ್ಗ ಅಕ್ಕ ಪಡೆಗೆ ತುರ್ತು ಮಾಹಿತಿ ಲಭಿಸಿತ್ತು. ಮಾಹಿತಿ ದೊರಕುತ್ತಿದ್ದಂತೆಯೇ ತಕ್ಷಣವೇ ಕಾರ್ಯಪ್ರವೃತ್ತರಾದ ಎಎಸ್‌ಐ ಅಮೃತಾ ಬಾಯಿ ಹಾಗೂ ಮಹಿಳಾ ಹೆಡ್ ಕಾನ್‌ಸ್ಟೇಬಲ್ ನಿರ್ಮಲಾ ಅವರು ಸ್ಥಳಕ್ಕೆ ಧಾವಿಸಿದರು.

ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಸ್ಥಳದಲ್ಲೇ ವಶಕ್ಕೆ ಪಡೆದ ಅಧಿಕಾರಿಗಳು, ಆತನನ್ನು ಕೋಟೆ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಬಳಿಕ ಆತನ ವಿರುದ್ಧ ಲಘು ಪ್ರಕರಣವನ್ನು ದಾಖಲಿಸಿಕೊಂಡು, ಮುಂದಿನ ದಿನಗಳಲ್ಲಿ ಇಂತಹ ಕೃತ್ಯವೆಸಗದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. 

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.