ಶಿವಮೊಗ್ಗ ಕೋರ್ಟ್​ನಲ್ಲಿ ಕೆಲಸ! 62 ಹುದ್ದೆಗಳಿಗೆ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನ

ಹಂಚಿಕೊಳ್ಳಿ
WhatsApp Facebook X Telegram
Shimoga Court
Shimoga Court

Posts in Shivamogga Court ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಕೋರ್ಟ್​ನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಈ ಸಂಬಂಧ ಹೊರಡಿಸಲಾಗಿರುವ ಪ್ರಕಟಣೆಯ ವಿವರ ಹೀಗಿದೆ

ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಒಟ್ಟು 06 ಪ್ರೋಸೆಸ್ ಜಾರಿಕಾರ ಹಾಗೂ 56 ಜವಾನ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಆದ https://shivamogga.dcourts.gov.in/notice-category/recruitments ಮೂಲಕ ಆಗಸ್ಟ್ 24 ರ ಒಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ಜಿ.ಎ. ಅವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಈ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಪಡೆಯಲು ‘DISTRICT COURT SHIVAMOGGA’ ಅಧಿಕೃತ ವೆಬ್‌ಸೈಟ್ ಅನ್ನು ಅಥವಾ ದೂರವಾಣಿ ಸಂಖ್ಯೆ: 08182-270321 ಅನ್ನು ಸಂಪರ್ಕಿಸಬಹುದಾಗಿದೆ.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor