BHADRAVATI

ಭದ್ರಾವತಿಯಲ್ಲಿಯು ಪೊಲೀಸರಿಂದ ಶುರುವಾಯ್ತು ವೆಹಿಕಲ್ ಸೀಜ್ ಆಪರೇಷನ್!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

bhadravati police action / ಮಲೆನಾಡುಟುಡೆ ಸುದ್ದಿ / ಶಿವಮೊಗ್ಗ / ಭದ್ರಾವತಿಯಲ್ಲಿಯು ಪೊಲೀಸರು ವೆಹಿಕಲ್ ಸೀಜ್ ಆಫರೇಷನ್ ಆರಂಭಿಸಿದ್ದಾರೆ. ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ವಿವಿಧ ದ್ವಿಚಕ್ರ ವಾಹನಗಳ ತಪಾಸಣೆ ನಡೆಸಿ ವಾಹನ ನಂಬರ್‌ಪ್ಲೇಟ್ ಹೊಂದಿಲ್ಲದ ಹಾಗೂ ದೋಷಪೂರಿತ ಸೈಲೆನ್ಸರ್‌ಹೊಂದಿರುವ 35 ಬೈಕ್​ಗಳ ವಿರುದ್ಧ ಆಕ್ಷನ್​ ತೆಗೆದುಕೊಂಡಿದ್ದಾರೆ.

ಸರ್ಕಲ್​ ಇನ್​ಸ್ಪೆಕ್ಟರ್​ ನಾಗಮ್ಮ ನೇತೃತ್ವದಲ್ಲಿ ಸಂಚಾರಿ ಠಾಣೆಯ ಎಸ್​ಐ ಚಂದ್ರಶೇಖರ ನಾಯ್ಕ ಹಾಗೂ ರಾಜೇಶ್ ಸಂಗೊಳ್ಳಿ ಮತ್ತು ಸಿಬ್ಬಂದಿ ವಿಶೇಷ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ವಾಹನ ಚಾಲಕರು ಮತ್ತು ಮಾಲೀಕರ ವಾಹನ ದಾಖಲಾತಿಗಳನ್ನು ಪರಿಶೀಲಿಸಿ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಿದರು.

ಅಪಘಾತ ಪ್ರಕರಣಗಳು ಸಹ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆಯಿಂದ ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ವಾಹನ ಚಾಲಕರು, ಮಾಲೀಕರು ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸ್ ಇಲಾಖೆ ಕೋರಿದೆ.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ