ಶಿವಮೊಗ್ಗ : ಆಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಗೆ 03 ವರ್ಷ ಜೈಲು ಶಿಕ್ಷೆ

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ
ಮಲೆನಾಡು ಟುಡೆ ಸಾಂದರ್ಭಿಕ ಚಿತ್ರ

ಶಿವಮೊಗ್ಗ : ಭದ್ರಾವತಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯುವಕನಿಗೆ 3 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಶಿವಮೊಗ್ಗದ ನ್ಯಾಯಾಲಯ ತೀರ್ಪು ನೀಡಿದೆ.

ಶಿವಮೊಗ್ಗ : ಜುಲೈ 25 ಮತ್ತು 26 ರಂದು ಮತದಾರರ ಪಟ್ಟಿಯ ವಿಶೇಷ ಪ್ರಚಾರ ದಿನ  

POCSO Case ಪ್ರಕರಣದ ಹಿನ್ನೆಲೆ 

2024ರಲ್ಲಿ ಭದ್ರಾವತಿ ತಾಲೂಕಿನ 20 ವರ್ಷದ ಯುವಕನೊಬ್ಬ 16 ವರ್ಷದ ಬಾಲಕಿಯೊಂದಿಗೆ ಗೆಳೆತನ ಬೆಳೆಸಿ, ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದನು. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.ಆ ಸಮಯದಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿದ್ದ ಪಿಎಸ್‌ಐ ಕವಿತಾ ಇ. ಅವರು  ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ಶಿವಮೊಗ್ಗದ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಈ ಸಂಬಂಧ ವಿಚಾರಣೆ ನಡೆದಿದ್ದು, ಸರ್ಕಾರಿ ಅಭಿಯೋಜಕರಾದ ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ನಿಂಗನಗೌಡ. ಪಾಟೀಲ್ ಅವರು ಜುಲೈ 23, 2026ರಂದು ಆರೋಪಿಗೆ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 31,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor