ಹೆಚ್.ಎಂ. ಚಂದ್ರಶೇಖರಪ್ಪ ನಿಧನ, ಅಂತಿಮ ದರ್ಶನ .ಅಂತ್ಯಕ್ರಿಯೆಯ ವಿವರ ಇಲ್ಲಿದೆ ? 

Published: 27 ಜುಲೈ 2026, 12:23 ಅಪರಾಹ್ನ • 1 min read
ಭಾಷೆ (Translate):
✨ AI ಓವರ್‌ವ್ಯೂ (ಮುಖ್ಯಾಂಶ)

Former MLA Chandrashekarappa ಶಿವಮೊಗ್ಗ: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಹೆಚ್.ಎಂ. ಚಂದ್ರಶೇಖರಪ್ಪ (78) ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ನಗರದ ಬಸವನಗುಡಿಯಲ್ಲಿರುವ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಇಂದು ಬೆಳಿಗ್ಗೆಯಿಂದ ಸಾರ್ವಜನಿಕರು ಹಾಗೂ ಅಭಿಮಾನಿಗಳಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಶಿವಮೊಗ್ಗ ಕಾಂಗ್ರೆಸ್​​​ಗೆ ಯುವಕರ ಭವಿಷ್ಯಕ್ಕಿಂತ ರಾಜಕೀಯವೇ…

Former MLA Chandrashekarappa ಶಿವಮೊಗ್ಗ: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಹೆಚ್.ಎಂ. ಚಂದ್ರಶೇಖರಪ್ಪ (78) ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ನಗರದ ಬಸವನಗುಡಿಯಲ್ಲಿರುವ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಇಂದು ಬೆಳಿಗ್ಗೆಯಿಂದ ಸಾರ್ವಜನಿಕರು ಹಾಗೂ ಅಭಿಮಾನಿಗಳಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಶಿವಮೊಗ್ಗ ಕಾಂಗ್ರೆಸ್​​​ಗೆ ಯುವಕರ ಭವಿಷ್ಯಕ್ಕಿಂತ ರಾಜಕೀಯವೇ ಮುಖ್ಯ : ಬಿ,ವೈ ರಾಘವೇಂದ್ರ

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ಜುಲೈ 26 ರರ  ಸಂಜೆ 6:15ಕ್ಕೆ ನಿಧನರಾದ ಅವರ ಪಾರ್ಥಿವ ಶರೀರವನ್ನು ರಾತ್ರಿ ಶಿವಮೊಗ್ಗಕ್ಕೆ ತರಲಾಗಿತ್ತು. ಜುಲೈ 27ರ ಸಂಜೆ ಅಂದರೆ ಇವತ್ತು  4:00 ಗಂಟೆಗೆ ಹೊಸಹಳ್ಳಿಯಲ್ಲಿರುವ ಅವರ ತೋಟದಲ್ಲಿ ವೀರಶೈವ ಲಿಂಗಾಯತ ಧಾರ್ಮಿಕ ಪದ್ಧತಿಯಂತೆ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕಾಂಗ್ರೆಸ್ ಉತ್ತರ ಬ್ಲಾಕ್ ಅಧ್ಯಕ್ಷ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹಾಗೂ ಶಿವಮೊಗ್ಗ ನಗರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಚಂದ್ರಶೇಖರಪ್ಪನವರು, 1997-98ರ ಅವಧಿಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧಿಸಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಜಯಗಳಿಸಿ ಶಾಸಕರಾಗಿದ್ದರು. ರಾಜ್ಯ ಮಾಜಿ ಶಾಸಕರ ವೇದಿಕೆ ಅಧ್ಯಕ್ಷರಾಗಿ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದ ಇವರ ಅವಧಿಯಲ್ಲಿ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿರ್ಮಾಣ ಹಾಗೂ ಗಾಜನೂರು ಡ್ಯಾಂ ಹೊಸದಾಗಿ ನಿರ್ಮಾಣವಾಗಿದ್ದವು.

ಮೃತರು ಇಬ್ಬರು ಪುತ್ರರಾದ ಮಾಜಿ ಕಾರ್ಪೊರೇಟರ್ ಹೆಚ್.ಸಿ. ಯೋಗೀಶ್, ಉದ್ಯಮಿ ಶರಣ್ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

END OF STORY

Prathapa thirthahalli

Senior Journalist | Malenadu Today
✓ Verified Journalist