ತೀರ್ಥಹಳ್ಳಿ ರಸ್ತೆಯಲ್ಲಿ ಮಾಲು ಸಮೇತ ಸಿಕ್ಕಿಬಿದ್ದು ಅಬ್ಬು! ದೊಡ್ಡಪೇಟೆ ಪೊಲೀಸರ ಆಪರೇಷನ್

Published: 27 ಜುಲೈ 2026, 6:56 ಅಪರಾಹ್ನ • 1 min read
✨ AI ಓವರ್‌ವ್ಯೂ (ಮುಖ್ಯಾಂಶ)

Ganja Peddler Arrested in Shivamogga / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ದೊಡ್ಡಪೇಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿ, ಆತನಿಂದ 1 ಕೆಜಿ 207 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. 2026 ಜುಲೈ 24 ರಂದು ಈ ಕಾರ್ಯಾಚರಣೆ ನಡೆಸಲಾಗಿದ್ದು, ಈ ಕುರಿತಾಗಿ ಪೊಲೀಸ್…

Ganja Peddler Arrested in Shivamogga / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ದೊಡ್ಡಪೇಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿ, ಆತನಿಂದ 1 ಕೆಜಿ 207 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

2026 ಜುಲೈ 24 ರಂದು ಈ ಕಾರ್ಯಾಚರಣೆ ನಡೆಸಲಾಗಿದ್ದು, ಈ ಕುರಿತಾಗಿ ಪೊಲೀಸ್ ಪ್ರಕಟಣೆಯನ್ನು ಸಹ ನೀಡಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೀರ್ಥಹಳ್ಳಿ ರಸ್ತೆಯಲ್ಲಿರುವ ಲೇಔಟ್ ಒಳಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದ ಮೇಲೆ ದೊಡ್ಡಪೇಟೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಹಾಗೂ ಸಿಬ್ಬಂದಿ ದಾಳಿ ನಡೆಸಿ 24 ವರ್ಷದ ಅಬ್ಬು ಶಾಬಾದ್ರಿ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತನಿಂದ ಅಂದಾಜು 65,000 ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗುತ್ತಿದೆ.

ಈ ಮಧ್ಯೆ ಸಾರ್ವಜನಿಕರು ಮಾದಕ ವಸ್ತುಗಳ ಬಳಕೆಯ ಬಗ್ಗೆ ಪಬ್ಲಿಕ್ ಐ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ 8277982900 ಸಂಖ್ಯೆಗೆ ದೂರು ನೀಡಬಹುದಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

END OF STORY

ajjimane ganesh

Senior Journalist | Malenadu Today
✓ Verified Journalist