ಶಿವಮೊಗ್ಗದಲ್ಲಿ ಶೇ.44ರಷ್ಟು ಮಳೆ ಕೊರತೆ: ಕೃಷಿ ಹಿನ್ನಡೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಜಿಲ್ಲಾಡಳಿತ ಸಜ್ಜು!

Published: 28 ಜುಲೈ 2026, 2:33 ಅಪರಾಹ್ನ • 1 min read
✨ AI ಓವರ್‌ವ್ಯೂ (ಮುಖ್ಯಾಂಶ)

Shivamogga Rain Deficit ಶಿವಮೊಗ್ಗ: ಪ್ರಸಕ್ತ ಮುಂಗಾರು ಋತುವಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.44ರಷ್ಟು ಮಳೆ ಕೊರತೆಯಾಗಿದ್ದು, ಇದುವರೆಗೆ ಕೇವಲ ಶೇ. 28ರಷ್ಟು ಮಾತ್ರ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ. ಶಿವಮೊಗ್ಗ : ಜುಲೈ 25 ಮತ್ತು 26 ರಂದು ಮತದಾರರ ಪಟ್ಟಿಯ ವಿಶೇಷ ಪ್ರಚಾರ ದಿನ  ಇಂದು ಜಿಲ್ಲಾಧಿಕಾರಿ…

Shivamogga Rain Deficit ಶಿವಮೊಗ್ಗ: ಪ್ರಸಕ್ತ ಮುಂಗಾರು ಋತುವಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.44ರಷ್ಟು ಮಳೆ ಕೊರತೆಯಾಗಿದ್ದು, ಇದುವರೆಗೆ ಕೇವಲ ಶೇ. 28ರಷ್ಟು ಮಾತ್ರ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಶಿವಮೊಗ್ಗ : ಜುಲೈ 25 ಮತ್ತು 26 ರಂದು ಮತದಾರರ ಪಟ್ಟಿಯ ವಿಶೇಷ ಪ್ರಚಾರ ದಿನ 

ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು  ಜಿಲ್ಲೆಯ ಪ್ರಮುಖ ಬೆಳೆಗಳಾದ ಮೆಕ್ಕೆಜೋಳ ಮತ್ತು ಭತ್ತದ ಬೆಳೆಯ ಪೈಕಿ, ಭತ್ತದ ಬಿತ್ತನೆಗೆ ಆಗಸ್ಟ್ ಕೊನೆಯ ವಾರದವರೆಗೆ ಮಳೆಯಾಗುವ ಆಶಾಭಾವನೆ ಇಟ್ಟುಕೊಳ್ಳಲಾಗಿದೆ. ಇನ್ನು ಈಗಾಗಲೇ ಬಿತ್ತನೆಯಾಗಿರುವ ಮೆಕ್ಕೆಜೋಳ ನಿರೀಕ್ಷಿತ ಪ್ರಮಾಣದಲ್ಲಿ ಮೊಳಕೆಯೊಡೆಯದೆ ಹುಲುಸಾಗಿ ಬೆಳೆಯದಿರುವುದು ಕಂಡುಬಂದಿದೆ. ಆದರೆ, ರೈತರ ಅಗತ್ಯಕ್ಕೆ ತಕ್ಕಷ್ಟು ರಸಗೊಬ್ಬರ ದಾಸ್ತಾನಿದ್ದು, ಕೊರತೆಯಾದಲ್ಲಿ ಸಕಾಲದಲ್ಲಿ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಡಿಸಿ ಪ್ರಭುಲಿಂಗ ಕವಳಿಕಟ್ಟಿ ಸ್ಪಷ್ಟಪಡಿಸಿದರು.

ಜಿಲ್ಲೆಯಲ್ಲಿರುವ ಒಟ್ಟು 280 ಮಳೆ ಮಾಪನ ಕೇಂದ್ರಗಳ ಪೈಕಿ 2026ರ ಜನವರಿ ವೇಳೆಗೆ 208 ಕೇಂದ್ರಗಳು ದುರಸ್ತಿಯಲ್ಲಿದ್ದವು. ಇವುಗಳಲ್ಲಿ ಈಗಾಗಲೇ 185 ಕೇಂದ್ರಗಳನ್ನು ಸರಿಪಡಿಸಲಾಗಿದ್ದು, ಇನ್ನುಳಿದವುಗಳನ್ನು ಮುಂದಿನ 15 ದಿನಗಳಲ್ಲಿ ಸುಸ್ಥಿತಿಗೆ ತರಲಾಗುವುದು ಎಂದರು. ಈ ಕುರಿತು ಜುಲೈ 25ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಹಿತಿ ನೀಡಲಾಗಿದೆ. ಅಲ್ಲದೆ, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬಿದ್ದ ಆಲಿಕಲ್ಲು ಮಳೆಯಿಂದ ಹಾನಿಗೊಳಗಾದ ತೋಟಗಾರಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಹಾಗೂ ಪರಿಹಾರ ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಂತ್ರಸ್ತ ಕುಟುಂಬಗಳಿಗೆ ಈಗಾಗಲೇ ಪರಿಹಾರ ಒದಗಿಸಲಾಗಿದೆ ಎಂದು ಅವರು ವಿವರಿಸಿದರು. 

ಕುಡಿಯುವ ನೀರಿನ ಅಭಾವ ನಿರ್ವಹಣೆಗೆ ಸಂಬಂಧಿಸಿದಂತೆ, ಸೊರಬ ತಾಲೂಕಿನ ಒಂದು ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಇನ್ನುಳಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಆಯ್ದ 373 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ತಾತ್ಕಾಲಿಕ ಪರಿಹಾರವಾಗಿ ಸ್ಥಳೀಯ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಒದಗಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಚುನಾವಣಾ ತಹಶೀಲ್ದಾರ್  ಮಂಜುಳಾ ಹೆಗಡಾಳ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

END OF STORY

Prathapa thirthahalli

Senior Journalist | Malenadu Today
✓ Verified Journalist